ಪತಂಜಲಿ ಯೋಗ ಸಮಿತಿ ವತಿಯಿಂದ ಉಚಿತ ಪ್ರಾಣ ಯೋಗ ಶಿಬಿರ ಉದ್ಘಾಟನೆ
ಉಡುಪಿ: ಪತಂಜಲಿ ಯೋಗ ಸಮಿತಿ ಉಡುಪಿ ಹಾಗೂ ಎಸ್ ವಿ ಎಸ್ ಹಳೆ ವಿದ್ಯಾರ್ಥಿ ಸಂಘ (ರಿ) ಕಟಪಾಡಿ ಇವರ ಸಹಯೋಗದಲ್ಲಿ ಆ.15 ರಿಂದ 24ರ ವರೆಗೆ 10 ದಿನಗಳ ಕಾಲ “ಉಚಿತ ಪ್ರಾಣ ಯೋಗ ಶಿಬಿರ” ವನ್ನು ಕಟಪಾಡಿಯ ಮಹಿಳಾ ಮಂಡಲದ ಸಭಾ ಭವನದಲ್ಲಿ ಭಾನುವಾರ ದೀಪ ಪ್ರಜ್ವಲಿಸಿ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಉಡುಪಿ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕ ರಾಘವೇಂದ್ರ ಭಟ್ , ವೆಂಕಟೇಶ್ ಮೇಹಂದಲೆ ಹಾಗೂ ಜಗದೀಶ್ ಕುಮಾರ್ ಇವರು ಉಪಸ್ಥಿತರಿದ್ದರು. […]
ಉಡುಪಿ: ಬಾಲಕಿಯರ ಸರ್ಕಾರಿ ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಯೋಗ ದಿನಾಚರಣೆ
ಉಡುಪಿ: ದೈಹಿಕ ಅಂಗ ಸಾಧನೆಯೊಂದಿಗೆ ಚಿತ್ತವೃತ್ತಿ ನಿಯಂತ್ರಣವೇ ಯೋಗದ ಆದ್ಯಗುರಿ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಯೋಗ ತುಂಬಾ ಸಹಕಾರಿ. ಆದ್ದರಿಂದ ವಿದ್ಯಾರ್ಥಿಗಳು ಯೋಗಾಭ್ಯಾಸದತ್ತ ಒಲವು ತೋರಬೇಕು ಎಂದು ಉಡುಪಿ ಪತಂಜಲಿ ಯೋಗ ಸಮಿತಿಯ ಶ್ರೀಮತಿ ವೇದಾವತಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಅವರು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎನ್ಎಸ್ಎಸ್ ಮತ್ತು ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಯೋಗ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟು ಮಾತನಾಡಿದರು. ಪತಂಜಲಿ ಸಮಿತಿಯ […]