24 ಗಂಟೆಯಲ್ಲಿ 12 ಶಿಶುಗಳು ಸೇರಿ 24 ರೋಗಿಗಳ ಸಾವು : ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣಮೃದಂಗ

ನಾಂದೇಡ್ (ಮಹಾರಾಷ್ಟ್ರ) : ಮಹಾರಾಷ್ಟ್ರದಲ್ಲಿ ಆರೋಗ್ಯ ಸೇವೆ ತೀವ್ರ ಕುಸಿತ ಕಾಣುತ್ತಿದೆಯೇ ಎಂಬ ಅನುಮಾನ ಮೂಡಿಸಿದೆ. ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣಮೃದಂಗ ಕೇಳಿಬಂದಿದೆ. ಕೆಲ ದಿನಗಳ ಹಿಂದಷ್ಟೇ ಥಾಣೆಯ ಸರ್ಕಾರಿ ಆಸ್ಪತ್ರೆಯಲ್ಲಿ 12 ತಾಸಿನಲ್ಲಿ 17 ಮಂದಿ ಸಾವಿಗೀಡಾದ ಘಟನೆ ಸಂಚಲನ ಉಂಟು ಮಾಡಿತ್ತು. ಇದೀಗ ಅಂಥದ್ದೇ ಮತ್ತೊಂದು ದುರ್ಘಟನೆ ನಡೆದಿದ್ದು, ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶಕ್ಕೆ […]