ನ. 27ರಿಂದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ಮೇಳದ ಪ್ರದರ್ಶನ ಆರಂಭ
ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಮೇರು ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ನೂತನ ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೇಳದ ಪ್ರದರ್ಶನ ನವೆಂಬರ್ 27 ರಿಂದ ಆರಂಭವಾಗಲಿದೆ. ಈ ಬಗ್ಗೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾಹಿತಿ ನೀಡಿದರು. ಪಾವಂಜೆ ದೇವಳದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್ ನೂತನ ಮೇಳದ ಬಗ್ಗೆ ಮಾಹಿತಿ ನೀಡಿ, ಸೀಮಿತ ಕಾಲಮಿತಿಯಲ್ಲಿ ಮೇಳದ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಯಿಂದ 11ರ ವರೆಗಿನ ಅವಧಿಯಲ್ಲಿ […]