ಏಪ್ರಿಲ್ 1 ರಿಂದ 2,000 ಕ್ಕಿಂತ ಹೆಚ್ಚಿನ ವ್ಯಾಪಾರಿ ಯುಪಿಐ ವಹಿವಾಟುಗಳ ಮೇಲೆ ಶೇಕಡಾ 1.1 ರಷ್ಟು ಇಂಟರ್‌ಚೇಂಜ್ ಶುಲ್ಕ ಅನ್ವಯ

ನವದೆಹಲಿ: ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರಿಪೇಯ್ಡ್ ಪಾವತಿ ಉಪಕರಣಗಳು (ಪಿಪಿಐಗಳು) – ವ್ಯಾಲೆಟ್‌ಗಳು ಅಥವಾ ಕಾರ್ಡ್‌ಗಳನ್ನು ಬಳಸಿಕೊಂಡು ಮಾಡುವ ವ್ಯಾಪಾರಿ ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್) ವಹಿವಾಟುಗಳ ಮೇಲೆ ಶೇಕಡಾ 1.1 ರಷ್ಟು ಇಂಟರ್‌ಚೇಂಜ್ ಶುಲ್ಕ ಅನ್ವಯಿಸುತ್ತದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಸೂಚನೆ ನೀಡಿದೆ. ಆನ್‌ಲೈನ್ ವ್ಯಾಪಾರಿಗಳು, ದೊಡ್ಡ ವ್ಯಾಪಾರಿಗಳು ಮತ್ತು ಸಣ್ಣ ಆಫ್‌ಲೈನ್ ವ್ಯಾಪಾರಿಗಳಿಗೆ ಮಾಡಿದ ರೂ.2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿಗಳ ಮೇಲೆ ಶುಲ್ಕವನ್ನು ವಿಧಿಸಲಾಗುತ್ತದೆ. […]