ಸೆ.10ರಿಂದ ಪಿಡಿಒ ವರ್ಗಾವಣೆ ಪ್ರಕ್ರಿಯೆ ಆರಂಭ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಿದ್ದು ಸೆ.10ರಿಂದ 20ರ ವರೆಗೆ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಹಾಗೂ ಸೆ.23 ಮತ್ತು 24ರಂದು ಸಾಮಾನ್ಯ ಕೋರಿಕೆ ವರ್ಗಾವಣೆಗಳ ಕೌನ್ಸಿಲಿಂಗ್ ಪ್ರಕ್ರಿಯೆಗಳು ಜರುಗಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸೆ.1 ರಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ನಾಗರಿಕ […]