ಶ್ರೀಕೃಷ್ಣ ಸೇವಾಧಾಮ ಟ್ರಸ್ಟ್ ಉದ್ಘಾಟಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಉಡುಪಿ: ಇಲ್ಲಿನ ಪೇಜಾವರ ಮಠದ ಅಂಗಸಂಸ್ಥೆಯಾದ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ, ಶ್ರೀಕೃಷ್ಣ ಸೇವಾಧಾಮ ಟ್ರಸ್ಟ್ ಅನ್ನು ಭಾರತ ಸರಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಸಚಿವೆ ಶೋಭಾ ಕೆರಂದ್ಲಾಜೆ,ಉಡುಪಿ ಶಾಸಕರಾದ ಕೆ.ರಘುಪತಿ ಭಟ್,ಉಡುಪಿ ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.