ದಲಿತ ಕೇರಿಗೆ ಪೇಜಾವರ ಶ್ರೀ ಭೇಟಿ; ಗುರುಗಳ ಹಾದಿಯಲ್ಲಿ ಶಿಷ್ಯನ ಹೆಜ್ಜೆ

ಉಡುಪಿ: ಹಿಂದೂ ಸಮಾಜದಲ್ಲಿದ್ದ ಅಸ್ಪೃಶ್ಯತೆಯನ್ನು ನಿರ್ಮೂಲನೆಗೊಳಿಸಿ ಸದೃಢ ದೇಶದ ಕಟ್ಟುವ ಸಲುವಾಗಿ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ದೇಶಾದ್ಯಂತ ದಲಿತರ ಕಾಲೊನಿಗಳಿಗೆ ಭೇಟಿ ನೀಡಿ ಕ್ರಾಂತಿಯಾದ ಹೆಜ್ಜೆಯನ್ನಿಟ್ಟದ್ದರು. ಇದೀಗ ಅವರ ಶಿಷ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕೂಡ ಗುರುಗಳ ದಾರಿಯಲ್ಲಿ ಹೆಜ್ಜೆ ಹಾಕುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಭಾನುವಾರ ಉಡುಪಿಯ ಕೊಡವೂರು ಗ್ರಾಮದ ಪಾಳೆಕಟ್ಟೆ ಎಂಬಲ್ಲಿ ಪರಿಶಿಷ್ಟರ ಬಡಾವಣೆಗೆ ತಮ್ಮ ಮೊದಲ ಭೇಟಿ ನೀಡಿ ಸಮಗ್ರ ಹಿಂದೂ ಸಮಾಜದ ಸಂಘಟನೆಗೆ ತಾವೂ ಸಿದ್ಧ ಎಂದಿದ್ದಾರೆ. ಅಯೋಧ್ಯೆ ರಾಮ […]