ಕೊರೊನಾ ವಿಪತ್ತು: ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ: ಗೋಶಾಲೆಗಳಿಗೆ 200 ಕೋಟಿ ರೂ. ಪ್ಯಾಕೇಜ್ ನೀಡಲು ಒತ್ತಾಯ

ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ.ಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರು ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ. ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ ಎಂದು ಶ್ರೀಗಳು ಪತ್ರದಲ್ಲಿ ತಿಳಿಸಿದ್ದಾರೆ. ಗೋಶಾಲೆಗಳ ನಿರ್ವಹಣೆ […]