ಪೇಜಾವರ ಶ್ರೀಗಳ ಆರೋಗ್ಯ ಚೇತರಿಕೆ, ಕಣ್ಣು ಬಿಟ್ಟ ಶ್ರೀಗಳು: ಸಿಎಂ ಯಡಿಯೂರಪ್ಪ

ಉಡುಪಿ: ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಶ್ರೀಗಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಆಗಿದೆ. ಈಗ ಶ್ರೀಗಳು ಕಣ್ಣು ಬಿಡುತ್ತಿದ್ದು, ಸಹಜ ಉಸಿರಾಟಕ್ಕೆ ಪ್ರಯತ್ನ ಮಾಡುತ್ತಿದ್ದಾರೆಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಅವರು ಶನಿವಾರ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಮಾಧ್ಯಮಗಳ ಜತೆಗೆ ಮಾತನಾಡಿದರು. ಪೇಜಾವರ ಶ್ರೀಪಾದರು ಶೀಘ್ರ ಗುಣಮುಖರಾಗಿ, ಮತ್ತೆ ಅವರು ಕೃಷ್ಣ ಮಠಕ್ಕೆ ಬಂದು ಕೃಷ್ಣನ ಸೇವೆ ಮಾಡುವಂತಾಗಬೇಕು. ಅದನ್ನು ನೋಡುವ […]