ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಮುಂಜಾನೆ 5 ಗಂಟೆಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಶ್ರೀಗಳ ಈಗಿನ ಆರೋಗ್ಯಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆಯಲ್ಲಿದ್ದಾರೆ. ಅವರಿಗೆ ನ್ಯುಮೋನಿಯಾಗೆ ಚಿಕಿತ್ಸೆ ನೀಡುತ್ತಾ, ಪ್ರತಿರೋಧಕ ಔಷಧಿ ಮತ್ತು ಸಹಾಯಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಪೇಜಾವರ ಶ್ರೀ ಅಸ್ವಸ್ಥ: ಸಚಿವ ಕೋಟ‌ ಭೇಟಿ

ಅಸ್ವಸ್ಥತೆ ಯಿಂದ ಮಣಿಪಾಲ ಆಸ್ಪತ್ರೆ ತೀವ್ರ ನಿಗಾದಲ್ಲಿ‌ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರನ್ನು  ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಬೆಳಿಗ್ಗೆ ಸಂದರ್ಶಿಸಿದರು. ಆಸ್ಪತ್ರೆಯ ನಿಗಾ ವಿಭಾಗಕ್ಕೆ ಭೇಟಿ ನೀಡಿದ ಅವರು, ವೈದ್ಯರೊಂದಿಗೆ ಸಮಾಲೋಚಿಸಿ ಶ್ರೀ ಗಳ ಆರೋಗ್ಯದ ಮಾಹಿತಿ ಪಡೆದರು.