ಇಂದು ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅಜ್ಜರಕಾಡಿನಲ್ಲಿ ವ್ಯವಸ್ಥೆ

ಉಡುಪಿ: ಇಂದು ಬೆಳಿಗ್ಗೆ ವಿಧಿವಶರಾದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಅಂತಿಮ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ವರೆಗೆ ಅಂತಿಮ ದರ್ಶನ ನಡೆಯಲಿದೆ. ಮಧ್ಯಾಹ್ನದ ಅನಂತರ ಪಾರ್ಥೀವ ಶರೀರವನ್ನು ಬೆಂಗಳೂರಿಗೆ ಕೊಂಡೊಯ್ಯಲಾಗುವುದು. ಬೆಂಗಳೂರಿನ ನ್ಯಾಷನಲ್ ಕಾಲೇಜ್ ಗ್ರೌಂಡ್ ನಲ್ಲಿ ಸಾರ್ವಜನಿಕ ದರ್ಶನ ನಡೆಯಲಿದೆ. ಆ ಬಳಿಕ ಶ್ರೀನಗರದ ಸಮೀಪ ಇರುವ ವಿದ್ಯಾಪೀಠದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದುಬಂದಿದೆ.

ಧಾರ್ಮಿಕ ಕ್ರಾಂತಿಯ ಹರಿಕಾರ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳು ಇನ್ನಿಲ್ಲ: ಕಳಚಿತು ಯತಿಪರಂಪರೆಯ ಮಹಾನ್ ಕೊಂಡಿ

ಉಡುಪಿ: ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಅಧೋಕ್ಷಜ ಮಠದ 32ನೇ ಸ್ವಾಮೀಜಿಗಳಾದ ಮಹಾಸಂತ ಶ್ರೀ ತೀವ್ರ ಅನಾರೋಗ್ಯದಿಂದ ಭಾನುವಾರ ಬೆಳಿಗ್ಗೆ ಹರಿಪಾದವನ್ನು ಸೇರಿದರು. ಉಡುಪಿಯ ಅಷ್ಟಮಠಗಳ ಯತಿ ಪರಂಪರೆಯಲ್ಲಿ ಅತೀ ಹಿರಿಯ ಯತಿಯಾಗಿರುವ ವಿಶ್ವೇಶ ತೀರ್ಥರಿಗೆ 89 ವರ್ಷ ವಯಸ್ಸಾಗಿತ್ತು. ಶ್ರೀಗಳ ನಿರ್ಗಮನದೊಂದಿಗೆ ಸುದೀರ್ಘ ಇತಿಹಾಸವನ್ನು ಹೊಂದಿರುವ ಉಡುಪಿ ಅಷ್ಟಮಠಗಳ ಯತಿಪರಂಪರೆಯಲ್ಲಿನ ಮಹಾನ್ ಕೊಂಡಿಯೊಂದು ಕಳಚಿಬಿದ್ದಂತಾಗಿದೆ. ಪೇಜಾವರ ಶ್ರೀಗಳನ್ನು ನ್ಯುಮೇನಿಯ (ಶ್ವಾಸಕೋಶ ಉಸಿರಾಟ ಸಮಸ್ಯೆ)ಯಿಂದಾಗಿ ಡಿ.20 ಶುಕ್ರವಾರ ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ತಜ್ಞ ವೈದ್ಯರ […]

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ತೀರಾ ಗಂಭೀರ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಅವರ ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಅವರು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಸಹಾಯದಲ್ಲಿ ಇದ್ದಾರೆ. ಅವರ ದೇಹ ಸ್ಥಿತಿ ನಿನ್ನೆಗಿಂತ ಮತ್ತಷ್ಟು ಕ್ಷೀಣವಾಗಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.