ಸಂಧಾನ ಎರಡೂ ಸಮುದಾಯಕ್ಕೆ ಸಮ್ಮತವಾಗಿರಲಿ, ರಾಮಮಂದಿರ ನಿರ್ಮಾಣ ವಿಳಂಬವಾಗದಿರಲಿ: ಪೇಜಾವರ ಶ್ರೀ

ಉಡುಪಿ: ಹಿಂದೂ ಹಾಗೂ ಮುಸಲ್ಮಾನರಿಗೆ ಅಸಮಾಧಾನ ಆಗದಂತೆ ರಾಮಮಂದಿರ ವಿವಾದ ಸಂಧಾನವಾಗಬೇಕು. ಸಂಧಾನದಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಸುಪ್ರೀಂ ಕೋರ್ಟ್ ತೀರ್ಮಾನ ತೆಗೆದುಕೊಳ್ಳಬೇಕು. ರಾಮಮಂದಿರ ನಿರ್ಮಾಣ ವಿಳಂಬವಾಗಬಾರದು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಉಡುಪಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ ರಾಮಮಂದಿರಕ್ಕೂ ಯಾವುದೇ ಸಂಬಂಧವಿಲ್ಲ. ಸಂಧಾನ ಎರಡೂ ಸಮುದಾಯಕ್ಕೆ ಸಮ್ಮತವಾಗಿರಬೇಕು. ಆದರೆ ಇಬ್ಬರಿಗೂ ಸಮ್ಮತವಾಗುವ ಸಂಧಾನ ಆಗುವ ಬಗ್ಗೆ ಸಂಶಯವಿದೆ. ಸಂಧಾನ ಆಗದಿದ್ದರೆ ನ್ಯಾಯದ ರೀತಿಯಲ್ಲಿ ಮಂದಿರ ನಿರ್ಮಾಣ ಆಗಲಿ ಎಂದರು. ರಾಮಮಂದಿರ ವಿವಾದ ಬಗೆಹರಿಸುವ ವಿಚಾರದಲ್ಲಿ ರವಿಶಂಕರ್ ಗುರೂಜಿ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲವಿದೆ. ಅವರನ್ನು ಅಧಿಕೃತವಾಗಿ ಸುಪ್ರೀಂ […]

ಅಭಿನಂದನ್ ತೋರಿದ ಸಾಹಸದಿಂದ ದೇಶದ ಗೌರವ ಹೆಚ್ಚಿದೆ: ಪೇಜಾವರ ಶ್ರೀ

ಉಡುಪಿ: ಭಾರತದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ತೋರಿದ ಧೈರ್ಯ ಮೆಚ್ಚುವಂತದ್ದು, ಶತ್ರು (ಪಾಕಿಸ್ತಾನ) ದೇಶದಲ್ಲಿ ಆತ ವರ್ತಿಸಿದ ರೀತಿ ದೇಶದ ಗೌರವವನ್ನು ಹೆಚ್ಚಿಸಿದೆ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಉಡುಪಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಭಿನಂದನ್ ಜೇಬಲ್ಲಿದ್ದ ಭದ್ರತೆಗೆ ಸಂಬಂಧಿಸಿದ ಕಾಗದ ಪತ್ರ ನುಂಗಿ ದೇಶದ ಕಾಳಜಿ ತೋರಿದ್ದಾರೆ. ಅವರು ಸಾಹಸಕ್ಕೆ ಪ್ರತಿಯೊಬ್ಬ ಭಾರತೀಯರು ಸೆಲ್ಯೂಟ್ ಹೊಡೆಯಬೇಕು. ಅವರಿಗೆ ಸಾವಿರ ಸಾವಿರ ಅಭಿನಂದನೆಗಳು ಎಂದರು. ಯುದ್ಧ ಬೇಡ: ಪಾಕಿಸ್ತಾನದ ಜೊತೆ ಯುದ್ಧ ಬೇಡ, ಯುದ್ಧದಿಂದ […]

ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸಿ ದಾಳಿ ಮಾಡಿದವರಿಗೆ ತಕ್ಕ ಪಾಠ ಕಲಿಸಬೇಕು: ಪೇಜಾವರ ಶ್ರೀ

ಉಡುಪಿ: ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸಿ ದಾಳಿ ಮಾಡಿದವರಿಗೆ ತಕ್ಕ ಪಾಠ ಕಲಿಸಬೇಕು. ಯಾವುದೇ ಯುದ್ಧಕ್ಕೆ ಎಡೆಮಾಡಿಕೊಡಬಾರದು. ಸರ್ಜಿಕಲ್ ಸ್ಡ್ರೈಕ್ ಮಾಡಿದರೂ ಉತ್ತಮ.  ಯುದ್ಧ ನಡೆದರೆ ಎರಡು ದೇಶಗಳ ಅಮಾಯಕ ಜನರು ಹಾಗೂ ಯೋಧರು ಬಲಿಯಾಗುತ್ತಾರೆ. ಉಗ್ರರಿಗೆ ಶಾಕ್ ಕೊಡಲು ಪ್ರಧಾನಿ ತೀರ್ಮಾನ ಕೈಗೊಳ್ಳಬೇಕು. ರಾಮಮಂದಿರ ನಿರ್ಮಾಣ ವಿಚಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಸಂಘ ಪರಿವಾರದ ಹಿರಿಯ ಮುಖಂಡರು ನಾಲ್ಕು ತಿಂಗಳ ಕಾಲಾವಕಾಶ ಕೇಳಿದ್ದಾರೆ. ಚುನಾವಣಾ ಸಮಯವಾಗಿರುವುದರಿಂದ ರಾಮಮಂದಿರ ವಿಷಯ ಎತ್ತಿದರೆ ತಪ್ಪಾಗಬಹುದು. ಹಾಗಾಗಿ ಈ ತೀರ್ಮಾನಕ್ಕೆ ಬರಲಾಗಿದೆ. […]

ಹಿಂದೂ ಧರ್ಮದ ಸಂಪ್ರದಾಯಗಳನ್ನು ಬದಲಾವಣೆ ಮಾಡುವ ಅಧಿಕಾರ ಯಾವುದೇ ಸರಕಾರಕ್ಕೂ ಇಲ್ಲ: ಪೇಜಾವರ ಶ್ರೀ

ಉಡುಪಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದ ಕಮ್ಯೂನಿಸ್ಟ್‌ ಸರಕಾರ ನ್ಯಾಯಾಲಯದ ತೀರ್ಮಾನವನ್ನು ಇಟ್ಟುಕೊಂಡು, ಹಠಮಾರಿ ಧೋರಣೆ ತೋರುತ್ತಿರುವುದು ಸರಿಯಲ್ಲ. ಬಹುಸಂಖ್ಯಾತ ಹಿಂದೂಗಳ ಅಭಿಪ್ರಾಯಕ್ಕೆ ಮನ್ನಣೆ ನೀಡಿ, ತಲತಲಾಂತರದಿಂದ ಶಬರಿಮಲೆಯಲ್ಲಿ ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯವನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಶುಕ್ರವಾರ ಪೇಜಾವರ ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ವಿಚಾರಗಳಲ್ಲಿ ನ್ಯಾಯಾಲಯ ಅಥವಾ ಸರಕಾರ ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ಈ ವಿಚಾರದಲ್ಲಿ ಜನರ ಭಾವನೆಗೆ ಬೆಲೆ ಕೊಡಬೇಕು. ಹಿಂದೂ ಧರ್ಮದ ಸಂಪ್ರದಾಯಗಳನ್ನು […]

“ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ” ಕೇಂದ್ರ-ರಾಜ್ಯ ಸರಕಾರಕ್ಕೆ ಚಾಟಿ ಬೀಸಿದ ಪೇಜಾವರ ಶ್ರೀ

ಉಡುಪಿ: ಮೀನುಗಾರರಿಗೆ ರಕ್ಷಣೆ ನೀಡುವುದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆದ್ಯ ಕರ್ತವ್ಯ. ಆದ್ದರಿಂದ ಕಳೆದ 19 ದಿನಗಳಿಂದ ಕಣ್ಮರೆಯಾಗಿರುವ ಮೀನುಗಾರರ ರಕ್ಷಣೆಗೆ ಸರಕಾರ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಆಗ್ರಹ ಪಡಿಸಿದರು. ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಹಾಗೂ ಏಳು ಮಂದಿ ಮೀನುಗಾರರ ಕಣ್ಮರೆಯಾಗಿ 19 ದಿನಗಳು ಕಳೆದರೂ ಇನ್ನು ಪತ್ತೆಯಾಗದ ಹಿನ್ನೆಲೆಯಲ್ಲಿ ಶ್ರೀಪಾದರು ಇಂದು ಮಲ್ಪೆ ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ […]