ದಿನೇಶ್ ಅಮೀನ್ ಮಟ್ಟು ಯಾತಕ್ಕಾಗಿ ಅರಳು-ಮರಳು ಹೇಳಿದ್ದರೋ ಗೊತ್ತಿಲ್ಲ: ಪೇಜಾವರ ಶ್ರೀ

ಉಡುಪಿ: ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಯಾವ ಉದ್ದೇಶವಿಟ್ಟುಕೊಂಡು ‘ಅರಳು ಮರಳು’ ಹೇಳಿಕೆ ನೀಡಿದರೋ ಗೊತ್ತಿಲ್ಲ. ಎದುರಿಗೆ ಸಿಕ್ಕಾಗ ಗೌರವಯುತವಾಗಿ ಮಾತನಾಡುತ್ತಾರೆ. ಆದರೆ, ಹಿಂದಿನಿಂದ ಮಾತ್ರ ಟೀಕೆ ಮಾಡುತ್ತಲೇ ಇರುತ್ತಾರೆ. ಇಂತಹ ನಡವಳಿಕೆ ಸರಿಯಲ್ಲ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿರುಗೇಟು ನೀಡಿದರು. ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ದಲಿತರು ಪ್ರವೇಶ ಮಾಡಿದ್ದಕ್ಕೆ ಉಡುಪಿಯನ್ನು ಸ್ವಚ್ಛಗೊಳಿಸಲು ಮುಂದಾಗಲಿಲ್ಲ. ಎಡಬಿಡಂಗಿ ಹೋರಾಟಗಾರರು ಪ್ರತಿಭಟನೆ ಮಾಡಿದ್ದಕ್ಕೆ ಶಿಷ್ಯರು ಶುದ್ಧಿಗೊಳಿಸಲು ಮುಂದಾಗಿದ್ದಾರೆ. ಭಿನ್ನಾಭಿಪ್ರಾಯಗಳ ಕುರಿತು ಅವರೊಂದಿಗೆ ಬಹಿರಂಗವಾಗಿ ಚರ್ಚಿಸಲು ಸಿದ್ಧ. ಉಡುಪಿ […]