ಪೇಜಾವರ ಶ್ರೀ ಅನಾರೋಗ್ಯ ಹಿನ್ನೆಲೆ ಗಣ್ಯರಿಂದ ಶ್ರೀಗಳ ಆರೋಗ್ಯ ವಿಚಾರಣೆ

ಉಡುಪಿ: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಉಸಿರಾಟ ಸಮಸ್ಯೆಯಿಂದಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಸ್ವಾಮೀಜಿಗಳು, ಮುಖಂಡರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿದರು. ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಭೇಟಿ ಮಾಡಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಠಕ್ಕೆ […]