ಪೇಜಾವರ ಶ್ರೀಗಳ ಅಭಿನಂದನಾ ಸಮಾರಂಭಕ್ಕೆ ರಾಷ್ಟ್ರಪತಿ ಆಗಮನ

ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಸನ್ಯಾಸಾಶ್ರಮ ಸ್ವೀಕರಿಸಿ 80ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಶ್ರೀಗಳ ಶಿಷ್ಯರು ಹಾಗೂ ಅಭಿಮಾನಿಗಳು ಡಿ. 27 ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ನಾಗರಿಕ ಅಭಿನಂದನಾ ಸಮಾರಂಭವನ್ನು ಪೇಜಾವರ ಮಠದ ಎದುರಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಅಭಿವಂದನಾ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಗವಹಿಸುತ್ತಿರುವುದರಿಂದ ಕಾರ್ಯಕ್ರಮದ ಸ್ಥಳ ನಿಗದಿಯ ಕುರಿತು ಪೊಲೀಸ್ ಇಲಾಖೆ ಹಾಗೂ ಮಠದ ಸಿಬ್ಬಂದಿ ಹಲವು ಸಭೆಗಳನ್ನು ನಡೆಸಿದ್ದರು. ಈ ಹಿಂದೆ ಭದ್ರತೆ ಹಾಗೂ ಇತರ ಕಾರಣಗಳಿಂದ ಮಠದ ರಾಜಾಂಗಣದಲ್ಲಿ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ರಾಷ್ಟ್ರಪತಿ ಭವನದ […]