ರಾಜ್ಯ ಸರ್ಕಾರದ ಭ್ರಷ್ಟಾಚಾರ, ದುರಾಡಳಿತಕ್ಕೆ ಜನ ಬೇಸತ್ತು ಹೋಗಿದ್ದಾರೆ: ಸೊರಕೆ
ಕುರ್ಕಾಲು: ರಾಜ್ಯ ಬಿಜೆಪಿ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು, ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆರೋಪಿಸಿದರು. ಗ್ರಾಮ ಪಂಚಾಯತ್ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಬೂತ್- ಬೂತ್ ಭೇಟಿ ಕಾರ್ಯಕ್ರಮದಡಿ ಗುರುವಾರ ಆಯೋಜಿಸಿದ್ದ ಕುರ್ಕಾಲು ಗ್ರಾಮದ ಬೂತ್ ಸಮಿತಿಗಳ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜನಪರ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಗ್ರಾಮೀಣಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದರ ಜತೆಗೆ ಗ್ರಾಮೀಣ ಭಾಗದಲ್ಲಿ ಸಮರ್ಪಕ ಸಂಪರ್ಕ ರಸ್ತೆಗಳ ನಿರ್ಮಾಣ ಯೋಜನೆ, ವ್ಯವಸ್ಥಿತ ದಾರಿದೀಪಗಳ ಅಳವಡಿಕೆ, […]