ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳ ಇತ್ಯರ್ಥ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಜಿಲ್ಲೆಯ ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತಕ್ಷಣದಲ್ಲಿ ಸ್ಪಂದಿಸಿ, ಪರಿಹಾರ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ಪ್ರತೀ ತಿಂಗಳ 3 ನೇ ಶನಿವಾರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ, ಎಲ್ಲಾ ಅಧಿಕಾರಿಗಳೊಂದಿಗೆ ಭೇಟಿ ನೀಡಿ, […]