ಏಳು ತಿಂಗಳಿನಿಂದ ನಾಪತ್ತೆಯಾಗಿರುವ ಪೆರಂಪಳ್ಳಿ ಯುವತಿ; ಶೀಘ್ರ ಪತ್ತೆಗೆ ಆಗ್ರಹಿಸಿ ಕೆಥೊಲಿಕ್ ಸಭಾದಿಂದ ಎಸ್ಪಿಗೆ ಮನವಿ
ಉಡುಪಿ: ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅನುಪಸ್ಥೀತಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಅವರಿಗೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೇರಿ ಡಿʼಸೋಜಾ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ನಿವಾಸಿಯಾಗಿರುವ ಅವಿನಾ (16) ಎಂಬ ಯುವತಿ 2021 ಏಪ್ರಿಲ್ 13 ರಂದು […]