ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ:ನಾಳೆ (ಜು.13) ನಗಾರಿ ಗೋಪುರದ ಶಿಲಾನ್ಯಾಸ ಸಮಾರಂಭ

ಹೆಬ್ರಿ: ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಮೊದಲ ಹಂತದ ಜೀರ್ಣೋದ್ದಾರದ ಪ್ರಯುಕ್ತ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಭವ್ಯವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ದೇವಳದ ನಗಾರಿ ಗೋಪುರದ ಶಿಲಾನ್ಯಾಸ ಸಮಾರಂಭ ಜು.13ರಂದು ಬೆಳಗ್ಗೆ 9 ರಿಂದ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಸರದಿ ಅರ್ಚಕರಾದ ಪಿ. ಸುಧಾಕರ ಅಡಿಗರ ಉಪಸ್ಥಿತಿಯಲ್ಲಿ ನಡೆಯಲಿದೆ. ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ದಾರು ಮುಹೂರ್ತ, ಶಿಲಾ ಮುಹೂರ್ತ, ಭುವನೇಶ್ವರೀ ಪೂಜೆ, ನಗಾರಿ ಗೋಪುರದ […]