ಪೆರ್ಡೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತ ಯಾಚನೆ
ಕಾಪು: ಬಿಜೆಪಿ ರಾಷ್ಟ್ರ ಧರ್ಮದ ಚಿಂತನೆ ಅನುಸರಿಸಿಕೊಂಡು ಬರುತ್ತಿರುವ ಪಕ್ಷವಾಗಿದೆ. ಬಿಜೆಪಿಯಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ರಾಷ್ಟ್ರ ಮುಖ್ಯ ಎಂಬ ಚಿಂತನೆಯನ್ನು ಅನುಸರಿಸಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಗೆಲುವಿಗಿಂತಲೂ ಧರ್ಮ ಗೆಲ್ಲಬೇಕು. ನಾಡಿನ ಪರಂಪರೆ ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪ ಗೆಲ್ಲಬೇಕು. ಅದಕ್ಕಾಗಿ ನಾವೆಲ್ಲರೂ ಕಟಿ ಬದ್ಧರಾಗಿ, ಕೆಲಸ ನಿರ್ವಹಿಸೋಣ ಎಂದು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಮಂಗಳವಾರ ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಗ್ರಾ.ಪಂ. ವ್ಯಾಪ್ತಿಯಲ್ಲಿ […]