ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಪೆರ್ಡೂರು ಗ್ರಾ.ಪಂ. ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷೆ ಚೇತನಾ ಶೆಟ್ಟಿ ಬಿಜೆಪಿ ಸೇರ್ಪಡೆ
ಉಡುಪಿ: ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಪೆರ್ಡೂರು ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷೆ ಚೇತನಾ ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡಸುಂದರ್ ಶೆಟ್ಟಿ ಆ 17ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಜಿಲ್ಲಾ ಬಿಜೆಪಿ […]
ಪೆರ್ಡೂರು: ಮಕ್ಕಳಿಗೆ ಪಾಠ ಕಲಿಸಬೇಕಾದ ಶಿಕ್ಷಕ ಕಂಠ ಮಟ್ಟ ಕುಡಿದು ಶಾಲಾ ಜಗುಲಿಯಲ್ಲಿ ಗಡದ್ದು ನಿದ್ದೆ!
ಪೆರ್ಡೂರು: ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಘಟನೆ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕೃಷ್ಣಮೂರ್ತಿ ಎಂಬ ಶಿಕ್ಷಕ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲೆಮಲಗಿದ್ದಾರೆ. ಮಕ್ಕಳಿಗೆ ಪಾಠ ಹೇಳಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಮಾಡಬೇಕಾಗಿರುವ ಶಿಕ್ಷಕರೇ ಕಂಠಪೂರ್ತಿ ಕುಡಿದು ಮಲಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಕನನ್ನು ಕೂಡಲೇ ಅಮಾನತು ಮಾಡುವಂತೆ ಪೆರ್ಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವು ಪೂಜಾರಿ, ಉಪಾಧ್ಯಕ್ಷೆ ಚೇತನಾ ಶೆಟ್ಟಿ, ಗ್ರಾಮ ಪಂಚಾಯಿತಿ […]
ಡಿ. 15 ರಂದು ಪೆರ್ಡೂರಿನಲ್ಲಿ ಉದ್ಯೋಗ ಮೇಳ
ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ […]