ಪೆರ್ಲದಲ್ಲಿ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ 20ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

ಉಡುಪಿ: ರಾಜ್ಯ ಯಕ್ಷಗಾನ ಅಕಾಡೆಮಿ ವತಿಯಿಂದ ಯಕ್ಷಗಾನ ತರಬೇತಿ ನೀಡುವ ಅರ್ಹ ಸಂಘ ಸಂಸ್ಥೆ ಗಳಿಗೆ ಅನುದಾನ ನೀಡಲಾಗುತ್ತದೆ. ಮಕ್ಕಳಿಗೆ ಯಕ್ಷಗಾನವನ್ನು ಕಲಿಸಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕಾಸರಗೋಡು ಪೆರ್ಲದಲ್ಲಿ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ 20ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಹಾಗೂ ಮಕ್ಕಳ ಯಕ್ಷಗಾನ ಬಯಲಾಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ […]