ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಜಿಲ್ಲಾದಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ಸಭೆ ಸಮಾರಂಭಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸುವ ಮುನ್ನ ಸ್ಥಳೀಯ ಸಂಸ್ಥೆಗಳು ಅಥವಾ ಗ್ರಾಮ ಪಂಚಾಯತ್ ನಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ತಪ್ಪಿದಲ್ಲಿ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಯಾವುದೇ ಪ್ರಚಾರ ಫಲಕಗಳು ಭಿತ್ತಿಪತ್ರಗಳು […]