ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಿಂದ ಪೆರ್ಣಂಕಿಲ ದೇವಳಕ್ಕೆ 1 ಲಕ್ಷ ರೂ. ದೇಣಿಗೆ
ಪೆರ್ಣಂಕಿಲ: ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ದೇವರ ಪುನರ್ ಪ್ರತಿಷ್ಠಾ ಕಾರ್ಯ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವ ಅಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ 1 ಲಕ್ಷ ರೂಪಾಯಿ ದೇಣಿಗೆಯನ್ನು ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರರಿಗೆ ನೀಡಿದರು. ಈಸಂದರ್ಭ ಶ್ರೀಗಳು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಸಿದರು. ಪ್ರಭಾ ವಿ ಶೆಣೈ, ಮುರಳಿ ಕಡೇಕಾರ್, ಪ್ರಶಾಂತ್ ಕಾಮತ್ ಉಪಸ್ಥಿತರಿದ್ದರು.
ಪಲಿಮಾರು ಶ್ರೀಗಳಿಂದ ಪೆರ್ಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಹಿರಿಯಡ್ಕ: ಇಲ್ಲಿನ ಪೆರ್ಣಂಕಿಲ ಗ್ರಾಮದಲ್ಲಿ ಸಮಗ್ರ ಜೀರ್ಣೋದ್ಧಾರಗೊಂಡು ಲೋಕಾರ್ಪಣೆಗೆ ಸಿದ್ಧವಾಗುತ್ತಿರುವ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ – ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಪಾದರು, ದೇವಾಲಯಗಳಿಗೆ ಉಳ್ಳವರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದವರೇ ಶಕ್ತಿಮೀರಿ ದೇಣಿಗೆ ಸಮರ್ಪಿಸುತ್ತಿದ್ದಾರೆ. ಇದಕ್ಕೆ ಅವರು ಕ್ಷೇತ್ರ ಸಾನಿಧ್ಯದಲ್ಲಿಟ್ಟಿರುವ ಭಕ್ತಿಯೇ ಕಾರಣ. ಧಾರ್ಮಿಕ ಕ್ಷೇತ್ರಗಳಿಗೆ ನೀಡುವ ಕಿಂಚಿತ್ ದೇಣಿಗೆಯೂ ಸದ್ಬಳಕೆಯಾಗುತ್ತದೆ. ಅದು ಧರ್ಮರಕ್ಷಣೆ, ಲೋಕೋಪಕಾರದ ಜೊತೆಗೆ ವೈಯುಕ್ತಿಕ […]
ಮಾ.17 – ಎ. 2 ರವರೆಗೆ 1500 ವರ್ಷಗಳ ಐತಿಹ್ಯದ ಪೆರ್ಣಂಕಿಲ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು
ಹಿರಿಯಡ್ಕ: ಪೆರ್ಣಂಕಿಲ ಗ್ರಾಮದ ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಸುಮಾರು 1500 ವರ್ಷಗಳ ಐತಿಹ್ಯವಿರುವ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು, ಮಾ.17 ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭವಾಗಿ ಎ. 2 ರಂದು ಜಾತ್ರೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ. ಈ ಬಗ್ಗೆ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್ ಪೆರ್ಣಂಕಿಲ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪೇಜಾವರ ಮಠದ ಕೀರ್ತಿಶೇಷ ವಿಶ್ವೇಶತೀರ್ಥ ಶ್ರೀಪಾದರ ಆಶಯದಂತೆ ಅವರ […]