ಪೆರ್ಣಂಕಿಲ: ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಸೆರೆ
ಉಡುಪಿ: ಕಟ್ಟಿಂಗೇರಿ ಗ್ರಾಮದ ಪೆರ್ಣಂಕಿಲ ಸಮೀಪದ ಗುಂಡುಪಾದೆ ಎಂಬ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿದೆ. ಗುಂಡುಪಾದೆ ಪರಿಸರದ ಜನರು ಕಳೆದ ಕೆಲವು ತಿಂಗಳಿನಿಂದ ಚಿರತೆಯ ಹಾವಳಿಯಿಂದ ಆತಂಕಕ್ಕೊಳಗಾಗಿದ್ದರು. ಅಲ್ಲದೆ, ಮನೆಯ ಸಾಕು ನಾಯಿಗಳು ಕಾಣೆಯಾಗುತ್ತಿರುವುದರಿಂದ ಸ್ಥಳೀಯರ ಆತಂಕ ಮತ್ತಷ್ಟು ಹೆಚ್ಚಾಗಿತ್ತು. ಈ ಬಗ್ಗೆ ಮೂಡುಬೆಳ್ಳೆ ಗ್ರಾಪಂ ಅಧ್ಯಕ್ಷರು ಹಾಗೂ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಅದರಂತೆ 15-20 ದಿನಗಳ ಹಿಂದೆ ಅರಣ್ಯ ಇಲಾಖೆಯವರು ಚಿರತೆಯ […]