ಮಾ.17(ನಾಳೆ) ಪೆರ್ಣಂಕಿಲ ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ
ಉಡುಪಿ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ.17 ರಂದು ಮಧ್ಯಾಹ್ನ 2.30 ರಿಂದ ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ಜರಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ.
ಮಾ.16 ರಿಂದ ಎ.2 ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ
ಉಡುಪಿ : ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವವು ಮಾ. 16ರಂದು ಮೊದಲ್ಗೊಂಡು ಎ. 2ರವರೆಗೆ ನಡೆಯಲಿರುವುದು. ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಬ್ರಹ್ಮಶ್ರೀ ವೇದಮೂರ್ತಿ ಪುತ್ತೂರು ಮಧುಸೂದನ ತಂತ್ರಿಯವರ ನೇತೃತ್ವದಲ್ಲಿ ಮತ್ತು ಪಾಡಿಗಾರು ಶ್ರೀನಿವಾಸ ತಂತ್ರಿ ಹಾಗೂ ವೈದಿಕರ ಸಹಯೋಗದಲ್ಲಿ ಶ್ರೀ ಮಹಾಗಣಪತಿ ಶ್ರೀ ಮಹಾಲಿಂಗೇಶ್ವರ ದೇವರ ನೂತನ ದೇವಾಲಯ ಸಮರ್ಪಣಾಪೂರ್ವಕ, ಪುನಃಪ್ರತಿಷ್ಠಾಪೂರ್ವಕ ಸಹಸ್ರ ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ನವೀಕೃತ ಶ್ರೀ ಪೇಜಾವರ ಶಾಖಮಠದದ […]