ವೈಯಕ್ತಿಕ ದ್ವೇಷ: ಅಣ್ಣನ ಮಕ್ಕಳನ್ನು ಕಬ್ಬಿಣದ ಸಲಾಕೆಯಿಂದ ಭೀಕರವಾಗಿ ಹತ್ಯೆಗೈದ ವ್ಯಕ್ತಿ.

ಬೆಂಗಳೂರು: ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ, ವ್ಯಕ್ತಿಯೊಬ್ಬ ತನ್ನ ಅಣ್ಣನ ಇಬ್ಬರು ಮಕ್ಕಳನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಕೊಂದಿರುವ ಘಟನೆ ಶನಿವಾರ ನಡೆದಿದೆ. ಕಮ್ಮಸಂದ್ರದ ಚಾಂದ್ ಪಾಷ ದಂಪತಿ ಮಕ್ಕಳಾದ ಜುನೈದ್ (8) ಹಾಗೂ ಇಶಾಕ್‌ (6) ಮೃತ ದುರ್ದೈವಿಗಳು. ಇನ್ನು ಹಲ್ಲೆಗೊಳಗಾಗಿದ್ದ ಮತ್ತೊಬ್ಬ ಬಾಲಕ ರೋಹನ್‌ (4) ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾನೆ. ಈ ಅವಳಿ ಮಕ್ಕಳ ಕೊಂದ ಆರೋಪಿ ಕಾಸಿಮ್ ಪಾಷನನ್ನು […]