ಪಿ.ಎಫ್.ಐ ತಕ್ಷಣ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ರೆಹಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್) ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಅದರ ಸಹವರ್ತಿ ಸಂಸ್ಥೆಗಳನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ)ಕಾಯಿದೆ, ಅಡಿಯಲ್ಲಿ ಐದು ವರ್ಷಗಳ ಕಾಲ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪಿಎಫ್‌ಐ ಕಾರ್ಯಕರ್ತ ನಾಸೀರ್ ಪಾಷಾ ಎಂಬವರು ಪತ್ನಿ ಮೂಲಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ […]
ದೇಶದಾದ್ಯಂತ ಪಿ.ಎಫ್.ಐ ನಿಷೇಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ: ತೇಜಸ್ವಿಸೂರ್ಯ
ಉಡುಪಿ: ಪಿ.ಎಫ್.ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆದಿದೆ. ಆರ್ಟಿಕಲ್ 370ನ್ನು ರದ್ದುಗೊಳಿಸಿರುವುದು ಹಾಗೂ ರಾಮ ಮಂದಿರ ನಿರ್ಮಾಣವನ್ನು ಸಹಿಸಲಾಗದ ಉಗ್ರರು ಈ ರೀತಿ ಭಯೋತ್ಪಾದಕ ಚಟುವಟಿಕೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ ಹೇಳಿದರು. ಅವರು ಮಂಗಳವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲಿನಲ್ಲಿ ಯುವಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯನ್ನುದ್ಘಾಟಿಸಿ ಮಾತನಾಡಿ, ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ […]
ಬಂಟ್ವಾಳದಲ್ಲಿ ಕಂಡು ಬಂದ ಬರಹ ಪಿ ಎಫ್ ಐ ಸಕ್ರಿಯವಾಗಿರುವ ಸಂಕೇತ: ಮುತಾಲಿಕ್
ಬಂಟ್ವಾಳ: ತಾಲೂಕಿನಲ್ಲಿ ಕಂಡು ಬಂದ ಪಿಎಫ್ ಐ ರಸ್ತೆ ಬರಹ ಒಂದು ಎಚ್ಚರಿಕೆಯಾಗಿದ್ದು ಪಿಎಫ್‌ಐ ಇನ್ನೂ ಸಕ್ರಿಯವಾಗಿದೆ ಎಂಬುದರ ಸಂಕೇತ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಉಡುಪಿಯಲ್ಲಿ ಬುಧವಾರ ಮಾತನಾಡಿದ ಪ್ರಮೋದ್ ಮುತಾಲಿಕ್, ಪಿಎಫ್‌ಐ ಬ್ಯಾನ್ ಅಥವಾ ಬಂಧನದಿಂದ ಅವರ ಆಟ ಮುಗಿಯುವುದಿಲ್ಲ, ಪುಂಡರನ್ನು ಹದ್ದುಬಸ್ತಿನಲ್ಲಿಡಲು ಹಿಂದೂ ಸಮಾಜ ಪೊಲೀಸ್ ಇಲಾಖೆ ಜೊತೆ ಸಹಕರಿಸಬೇಕು ಎಂದು ಹೇಳಿದ್ದಾರೆ. ಪಿಎಫ್‌ಐನ ಸಾವಿರಾರು ಕಾರ್ಯಕರ್ತರು ಇನ್ನೂ ಸಕ್ರಿಯವಾಗಿ ಇದ್ದಾರೆ ಎಂದು ಹೇಳಿರುವ ಮುತಾಲಿಕ್, ಕುತಂತ್ರ, ಷಡ್ಯಂತ್ರ, […]
ಕೇರಳ ಹೈಕೋರ್ಟ್ ನಿಂದ ಪಿಎಫ್‌ಐ ಗೆ ತಪರಾಕಿ: ಬಂದ್ ವೇಳೆಯ ಹಾನಿಗಾಗಿ 5.20 ಕೋಟಿ ರೂಪಾಯಿ ಪರಿಹಾರ ನೀಡಲು ಆದೇಶ
ಕೊಚ್ಚಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕರ ಬಂಧನವನ್ನು ವಿರೋಧಿಸಿ ಸೆಪ್ಟೆಂಬರ್ 23 ರಂದು ಕರೆ ನೀಡಿದ್ದ ಬಂದ್ ವೇಳೆ ಉಂಟಾದ ಹಾನಿಗೆ ಪರಿಹಾರವಾಗಿ 5.20 ಕೋಟಿ ರೂಪಾಯಿಗಳನ್ನು ಠೇವಣಿ ಮಾಡುವಂತೆ ಕೇರಳ ಹೈಕೋರ್ಟ್ ಗುರುವಾರ ಆದೇಶಿಸಿದೆ. ಈ ಮೊತ್ತವನ್ನು 2 ವಾರಗಳಲ್ಲಿ ಠೇವಣಿ ಮಾಡುವಂತೆ ಕೋರ್ಟ್ ತಾಕೀತು ಮಾಡಿದೆ. ವಿಭಾಗೀಯ ಪೀಠ ನ್ಯಾಯಮೂರ್ತಿಗಳಾದ ಎ.ಕೆ. ಜಯಶಂಕರ ನಂಬಿಯಾರ್ ಮತ್ತು ಸಿ.ಪಿ.ಮೊಹಮ್ಮದ್ ನಿಯಾಸ್ ಅವರು ಪಿಎಫ್‌ಐ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಂಡಿದ್ದಾರೆ ಮತ್ತು ಪರಿಹಾರವಿಲ್ಲದೆ ಜಾಮೀನು […]
ಯುಎಪಿಎ ಅಧಿಕಾರ ಚಲಾಯಿಸಿ ಪಿಎಫ್‌ಐ ನಿಗ್ರಹಿಸಿ: ರಾಜ್ಯಗಳಿಗೆ ಕೇಂದ್ರದ ನಿರ್ದೇಶನ
ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿಗಳು ಮತ್ತು ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘಗಳೆಂದು ಘೋಷಿಸಿದ ನಂತರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ(ಯುಎಪಿಎ), 1967 ರ ಅಧಿಕಾರವನ್ನು ಅವುಗಳ ವಿರುದ್ಧ ಚಲಾಯಿಸಲು ಕೇಂದ್ರ ಸರ್ಕಾರವು ನಿರ್ದೇಶನ ನೀಡಿದೆ. ನಿನ್ನೆ ಹೊರಡಿಸಿದ ಅಧಿಸೂಚನೆಯಲ್ಲಿ, ಕೇಂದ್ರ ಸರ್ಕಾರವು ಪಿಎಫ್‌ಐ, ಅದರ ಸಹವರ್ತಿಗಳು ಮತ್ತು ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಘೋಷಿಸಿದೆ. ಪಿಎಫ್‌ಐ ಮತ್ತು ಸಂಬಂಧಿತ […]