ಆರ್‌ಎಸ್‌ಎಸ್ ನಾಯಕ ರುದ್ರೇಶ್ ಕೊಲೆಗಾರ ಮೊಹಮ್ಮದ್ ಘೌಸ್ ನಯಾಜಿ ಬಂಧನ: ದ. ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರ
ನವದೆಹಲಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪದಾಧಿಕಾರಿಯನ್ನು ಕೊಂದ ಆರೋಪಿ ಮೊಹಮ್ಮದ್ ಘೌಸ್ ನಯಾಜಿಯನ್ನು ಬಂಧಿಸಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಿಷೇಧಿತ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಕ್ರಿಯ ಸದಸ್ಯ ನಯಾಜಿ 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಆರ್ ರನ್ನು ಸಂಚು ರೂಪಿಸಿ ಹತ್ಯೆಗೈದಿದ್ದ. 35 ವರ್ಷದ ರುದ್ರೇಶ್ ಆರ್‌ಎಸ್‌ಎಸ್‌ನ ಶಿವಾಜಿನಗರ ಶಾಖೆಯ ಮಂಡಲ ಅಧ್ಯಕ್ಷ ಮತ್ತು ಬಿಜೆಪಿ ಶಿವಾಜಿನಗರ ಕಾರ್ಯದರ್ಶಿಯಾಗಿದ್ದರು. ಘಟನೆಯ ನಂತರ, […]
ಜೂನ್ 30ರೊಳಗೆ ಶರಣಾಗಿ; ಇಲ್ಲದಿದ್ದರೆ ಮನೆ ಜಪ್ತಿಗೆ ತಯಾರಾಗಿ: ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳಿಗೆ ಎನ್.ಐ.ಎ ವಾರ್ನಿಂಗ್
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು ಸ್ವಯಂ ಪ್ರೇರಿತವಾಗಿ ಜೂನ್.30ರೊಳಗೆ ಹಾಜರಾಗಬೇಕು ಎಂದು ಎನ್‌ಐಎ ಕೋರ್ಟ್ ಆದೇಶ ಹೊರಡಿಸಿದೆ. ಒಂದು ವೇಳೆ ಜೂನ್.30ರೊಳಗೆ ಶರಣಾಗದಿದ್ದಲ್ಲಿ ಆರೋಪಿಗಳ ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಎನ್‌ಐಎ ಕೋರ್ಟ್ ಹೇಳಿದೆ. ಈ ಬಗ್ಗೆ ಸುಳ್ಯದಲ್ಲಿ ಧ್ವನಿವರ್ಧಕದ ಮೂಲಕ ಸಂದೇಶ ನೀಡಲಾಗಿದೆ. ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಮಾಡಿದ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಘೋಷಿಸಲಾಗಿದೆ. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ […]
ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಪಿ.ಎಫ್.ಐ, ಬಜರಂಗದಳ ನಿಷೇಧ ಪ್ರಸ್ತಾಪ; ಮೀಸಲಾತಿ ಹೆಚ್ಚಳ
ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮಂಗಳವಾರ ತನ್ನ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷವು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ದೊಡ್ಡ ಭರವಸೆಗಳನ್ನು ನೀಡಿರುವ ಕಾಂಗ್ರೆಸ್, ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಬಜರಂಗ ದಳದಂತಹ “ಹಗೆತನ ಅಥವಾ ದ್ವೇಷವನ್ನು ಉತ್ತೇಜಿಸುವ” ಸಂಘಟನೆಗಳ ಮೇಲೆ ನಿಷೇಧವನ್ನು ಪ್ರಸ್ತಾಪಿಸಿದೆ. ಪಕ್ಷದ ಪ್ರಕಾರ, “ಕಾನೂನು ಮತ್ತು ಸಂವಿಧಾನವು ಪವಿತ್ರವಾಗಿದೆ ಮತ್ತು ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಅಥವಾ ದ್ವೇಷವನ್ನು ಉತ್ತೇಜಿಸುವ ಬಜರಂಗದಳ, ಪಿ.ಎಫ್.ಐ ಅಥವಾ […]
ಕರ್ನಾಟಕದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ: ಅಮಿತ್ ಶಾ
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಕಳೆದ 2 ತಿಂಗಳಲ್ಲಿ ನಾನು ರಾಜ್ಯಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ ಮತ್ತು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ನೋಡಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿಗೆ ಭಾರಿ ಜನಾದೇಶ ಸಿಗಲಿದೆ.ಮಂಡ್ಯದ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮುಂಬರುವ ರಾಜ್ಯಗಳ […]
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 14 ಕ್ಕೆ ಏರಿಕೆ
ಮಂಗಳೂರು: ಜುಲೈ 26 ರಂದು ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯು ಶನಿವಾರದಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂದು ವರದಿಯಾಗಿದೆ. ಸುಳ್ಯ ನಿವಾಸಿ ಶಾಹಿದ್ ಬೆಳ್ಳಾರೆ ಬಂಧಿತ ಆರೋಪಿ ಎನ್ನಲಾಗಿದೆ. ಸುಳ್ಯದ ಶಾಹಿದ್ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮತ್ತು ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆಯ ಸಂಬಂಧಿಕನಾಗಿದ್ದಾನೆ ಎನ್ನಲಾಗಿದೆ. […]