ಉಡುಪಿ ಅನುಮತಿ ಇಲ್ಲದೆ ರಸ್ತೆ ತಡೆ ನಡೆಸಿ ಪ್ರತಿಭಟನೆ: 11 ಮಂದಿ ಪಿಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
ಉಡುಪಿ: ದೇಶಾದ್ಯಂತ ಪಿಎಫ್ಐ ಕಚೇರಿಗಳ ಮೇಲೆ ಎನ್.ಐ.ಎ ದಾಳಿ ನಡೆಸಿದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ನಗರದಲ್ಲಿ ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ 11 ಮಂದಿ ಪಿ.ಎಫ್.ಐ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ಸಂಜೆ ಪೂರ್ವಾನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಲ್ಲದೆ ರಸ್ತೆ ತಡೆ ನಡೆಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನಗರದ ಕಲ್ಪನಾ ಟಾಕೀಸ್ ಬಳಿ ಗುರುವಾರ ಸಂಜೆ ಪ್ರತಿಭಟನೆ ನಡೆಸಿದ ಪಿ.ಎಫ್.ಐ ಕಾರ್ಯಕರ್ತರು ರಸ್ತೆ ತಡೆಗೆ ಯತ್ನಿಸಿದಾಗ ಉಡುಪಿ ನಗರ […]
ದೇಶಾದ್ಯಂತ ಪಿ.ಎಫ್.ಐ ಕಚೇರಿಗಳ ಮೇಲೆ ಎನ್.ಐ.ಎ ದಾಳಿ: ಬಂಧಿತರ ಸಂಖ್ಯೆ 106 ಕ್ಕೆ ಏರಿಕೆ
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ, ಜಾರಿ ನಿರ್ದೇಶನಾಲಯ ಮತ್ತು ಸ್ಥಳೀಯ ಪೊಲೀಸರು ಗುರುವಾರ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಉತ್ತರ ಪ್ರದೇಶ ಮತ್ತು ಅಸ್ಸಾಂ ಸೇರಿದಂತೆ 11 ರಾಜ್ಯಗಳಾದ್ಯಂತ ಶಂಕಿತ ಭಯೋತ್ಪಾದಕ-ಧನಸಹಾಯ ಚಟುವಟಿಕೆಗಳನ್ನು ಹತ್ತಿಕ್ಕಲು ಏಕಕಾಲದಲ್ಲಿ ದಾಳಿಗಳನ್ನು ಪ್ರಾರಂಭಿಸಿದ್ದು, ಬೆಳಗಿನ ಜಾವ 3.30ರಿಂದ ಇದುವರೆಗೆ ದಾಳಿ ಮುಂದುವರಿದಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ 100ಕ್ಕೂ ಹೆಚ್ಚು ನಾಯಕರನ್ನು ಈ ದಾಳಿಯಲ್ಲಿ ಬಂಧಿಸಲಾಗಿದೆ. ಕೇರಳ (22) ಮಹಾರಾಷ್ಟ್ರ ಮತ್ತು ಕರ್ನಾಟಕ (ತಲಾ 20), ತಮಿಳುನಾಡು (10), ಅಸ್ಸಾಂ (9), ಉತ್ತರ […]
ಮಂಗಳೂರು: ಪಿಎಫ್‌ಐ, ಎಸ್‌ಡಿಪಿಐ ಕಚೇರಿಗಳ ಮೇಲೆ ಎನ್‌ಐಎ ದಾಳಿ
ಮಂಗಳೂರು: ಇಲ್ಲಿನ ಪಿ.ಎಫ್.ಐ, ಎಸ್.ಡಿಪಿ.ಐ ಸಂಘಟನೆಗಳ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸುವ ಜನರ ವಿರುದ್ಧ ಸಂಸ್ಥೆಯ ರಾಷ್ಟ್ರವ್ಯಾಪಿ ಶೋಧದ ಭಾಗವಾಗಿ ಗುರುವಾರ ಬೆಳಿಗ್ಗೆ ಈ ದಾಳಿ ನಡೆಸಲಾಗಿದೆ. ಎರಡೂ ಸಂಘಟನೆಗಳ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಬಜ್ಪೆ, ನೆಲ್ಲಿಕಾಯಿ ಮಾರ್ಗ, ಕುಳಾಯಿ ಮತ್ತು ಕಾವೂರಿನಲ್ಲಿ ಎನ್.ಐ.ಎ ದಾಳಿ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿ ವೇಳೆ […]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂರು ಪ್ರಮುಖ ಆರೋಪಿಗಳ ಬಂಧನ; ಒಟ್ಟು ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯು ಒಂದು ಪೂರ್ವ ನಿಯೋಜಿತ ಷಡ್ಯಂತ್ರದ ಭಾಗವೆಂದು ಮುಖ್ಯಮಂತ್ರಿ ಬೊಮ್ಮಾಯಿ ಉಲ್ಲೇಖಿಸುತ್ತಲೇ ಬಂದಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ನಡೆದು ಎರಡು ವಾರಗಳು ಕಳೆದಿದ್ದು, ದಿನಗಳ ಅಂತರದಲ್ಲಿ ಬಂಧನಗಳು ನಡೆಯುತ್ತಲೇ ಇವೆ. ಇದೀಗ ಪ್ರವೀಣ್ ಹತ್ಯೆಗೆ ಸಂಬಂಧಿಸಿ ಸುಳ್ಯದ ಮೂವರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಿಯಾಬುದ್ದೀನ್ ಅಲಿ, ರಿಯಾಜ್ ಹಾಗೂ ಎಲಿಮಲೆಯ ಬಶೀರ್ ಬಂಧಿತರು ಎಂದು ವರದಿಯಾಗಿದೆ. ಈ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ […]
ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವ ಸಂಘಟನೆಗಳ ಮೇಲೆ ನಿಷೇಧ: ಎನ್ಎಸ್ಎ ಅಜಿತ್ ದೋವಲ್ ಉಪಸ್ಥಿತಿಯ ಅಂತರ್ಧರ್ಮೀಯ ಸಂವಾದದಲ್ಲಿ ನಿರ್ಣಯ
ನವದೆಹಲಿ: ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಶನಿವಾರ ಆಯೋಜಿಸಿದ್ದ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, “ಕೆಲವು ಅಂಶಗಳು” ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಇದು ಇಡೀ ರಾಷ್ಟ್ರದ ಮೇಲೆ ಪರಿಣಾಮ ಬೀರುತ್ತಿದ್ದು, ಇದನ್ನು ಎದುರಿಸಲು ಧಾರ್ಮಿಕ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದರು. ಕೆಲವರು ಧರ್ಮದ ಹೆಸರಿನಲ್ಲಿ ಹಗೆತನ ಸೃಷ್ಟಿಸಿ ಇಡೀ ದೇಶದ ಮೇಲೆ ದುಷ್ಪರಿಣಾಮ ಬೀರುತ್ತಾರೆ. ಇದಕ್ಕೆ ನಾವು ಮೂಕಪ್ರೇಕ್ಷಕರಾಗಲು ಸಾಧ್ಯವಿಲ್ಲ. […]