ರಾಜ್ಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ: ಕರ್ನಾಟಕ ರಾಜ್ಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ 2021 -2022 ನೇ ಸಾಲಿನ ಮೊದಲ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಅಧ್ಯಕ್ಷರಾದ ವಿಮಲಾ ಎಸ್ ಬಾಯರಿ ಅವರು ವಹಿಸಿದ್ದರು. ರಾಜ್ಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಅಧ್ಯಕ್ಷೆ ಚಂದ್ರಿಕಾ ಧಮ್ಮಳ್ಳಿ, […]
ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೊಡವೂರು:ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪಿ.ಎಚ್.ಸಿ ಮಲ್ಪೆ ಮತ್ತು ಉಪಕೇಂದ್ರ ಕೊಡವೂರು ವತಿಯಿಂದ ಕೊಡವೂರು ವಾರ್ಡಿನಲ್ಲಿ 11ನೆಯ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ತೇಶ್ಮ, ಶ್ರೀ ದೇವಿ ಜ್ಞಾನೋದಯ ಭಜನಾ ಮಂದಿರದ ಅಧ್ಯಕ್ಷರಾದ ದಿನೇಶ್ ಪುತ್ರನ್, ಮಾತೃ ಮಂಡಳಿಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಅಶೋಕ್, ಚಂದ್ರಾವತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.