ಫಿಲಿಪ್ಪೀನ್ಸ್‌ನಲ್ಲಿ ದೋಣಿ ಮುಳುಗಡೆ ಹಿನ್ನೆಲೆ 30 ಮಂದಿ ಸಾವು, 40 ಪ್ರಯಾಣಿಕರ ರಕ್ಷಣೆ

ಮನಿಲಾ (ಫಿಲಿಪ್ಪೀನ್ಸ್): ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ 30 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಫಿಲಿಪ್ಪೀನ್ಸ್ ರಾಜಧಾನಿ ಸಮೀಪದ ಸರೋವರದಲ್ಲಿ ಗುರುವಾರ ನಡೆದಿದೆ.ಘಟನೆಯಿಂದ 40 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಫಿಲಿಪ್ಪೀನ್ಸ್ ಕರಾವಳಿ ರಕ್ಷಣಾ ಪಡೆ ತಿಳಿಸಿದೆ ಫಿಲಿಪ್ಪೀನ್ಸ್ ದೇಶದ ರಾಜಧಾನಿಯ ಸಮೀಪದ ಸರೋವರದಲ್ಲಿ ದೋಣಿ ಮಗುಚಿ ಅಪಾರ ಸಾವುನೋವು ಸಂಭವಿಸಿದೆ. ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಬಲವಾದ ಗಾಳಿಯಿಂದಾಗಿ ಯಾಂತ್ರೀಕೃತ ದೋಣಿ ಒಂದು ಕಡೆಗೆ ವಾಲಿತ್ತು. ಇದರಿಂದ ಭಯಭೀತರಾದ ಪ್ರಯಾಣಿಕರು ದೋಣಿಯ ಒಂದೇ ಕಡೆ […]