‘ಮತದಾನ’-ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ-2023 ರ ಮತದಾನದ ಹಬ್ಬವನ್ನು ಸ್ಮರಣೀಯವಾಗಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಪತ್ರಿಕಾ ಹಾಗೂ ಹವ್ಯಾಸಿ ಛಾಯಾಗ್ರಾಹಕರಿಗಾಗಿ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ವಿಷಯ: ಮತದಾನ ಅರ್ಹತೆ: ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರು ಬಹುಮಾನ: ಪ್ರಥಮ: 25,000/- ದ್ವಿತೀಯ: 15,000/- ತೃತೀಯ: 10,000/- ಸಮಾಧಾನಕರ: 6,000/- ವಿಶೇಷ: 5000/- ಛಾಯಾಚಿತ್ರಗಳನ್ನು ಸಲ್ಲಿಸಲು ಕೊನೆ ದಿನ: 20-05-2023, ಶನಿವಾರ ಸಂಜೆ 5 ಗಂಟೆ ವಿಳಾಸ: [email protected]