ಮಣಿಪಾಲ: ಫೋಟೋಗ್ರಫಿ–ವೀಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ: ಮಣಿಪಾಲ ಸಿಂಡ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಸ್ವ-ಉದ್ಯೋಗಾಕಾಂಕ್ಷಿಗಳಿಗಾಗಿ ಸೆಪ್ಟೆಂಬರ್‌ 16ರಿಂದ 30 ದಿನಗಳ ‘ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ’ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ 18ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಖಾಲಿ ಹಾಳೆಯಲ್ಲಿ ಪೂರ್ಣವಿಳಾಸ, ಪಿನ್‌ಕೋಡ್‌, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ ಹಾಗೂ ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು ಮುಂತಾದ […]