ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಮತ್ತೆರಡು ಪಿಐಎಲ್ ಅರ್ಜಿ

ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಮತ್ತೆರಡು ಪಿಐಎಲ್ ಅರ್ಜಿ ಸಲ್ಲಿಕೆಯಾಗಿದೆ. ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಈಗಾಗಲೇ ಹೈಕೋರ್ಟ್‌ ಮೆಟ್ಟಿಲೇರಿರುವುದು ಎಲ್ಲರಿಗೂ ತಿಳಿದಿದೆ. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು […]