ಕೊಚ್ಚಿ: ದೇಶದ ಪ್ರಪ್ರಥಮ ವಾಟರ್ ಮೆಟ್ರೋಗೆ ಚಾಲನೆ: ಪ್ರವಾಸೋದ್ಯಮಕ್ಕೆ ಉತ್ತೇಜನ

ಕೊಚ್ಚಿ: ಕೇರಳದ ಬಂದರು ನಗರವಾದ ಕೊಚ್ಚಿಯ ಸುತ್ತಲಿನ ಹತ್ತು ಸಣ್ಣ ದ್ವೀಪಗಳನ್ನು ಸಂಪರ್ಕಿಸುವ ದೇಶದ ಮೊದಲ ವಾಟರ್ ಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಲಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ತಯಾರಿಸಿದ ಎಂಟು ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳೊಂದಿಗೆ ಮೆಟ್ರೋ ಯೋಜನೆಯು ಪ್ರಾರಂಭವಾಗಲಿದೆ ಎಂದು ವಾಟರ್ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ರೈಲು, ರಸ್ತೆ ಮತ್ತು ನೀರನ್ನು ಸಂಪರ್ಕಿಸುವ ಇಂಟಿಗ್ರೇಟೆಡ್ ಮೆಟ್ರೋ ವ್ಯವಸ್ಥೆಯು ರಾಜ್ಯದ ಅಭಿವೃದ್ದಿಗೆ ವೇಗ ನೀಡಲಿದೆ. ರಸ್ತೆ ಸಾರಿಗೆ ವ್ಯವಸ್ಥೆಯ ಮೇಲಿನ ಒತ್ತಡಗಳನ್ನು ಕಡಿಮೆಗೊಳಿಸಲು ಜಲ […]

ಚಿನ್ನಾಭರಣ ಹಗರಣ ಪ್ರಕರಣ: ಕೇರಳ ಕಾಂಗ್ರೆಸ್‌ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಆಗ್ರಹ; ಪೊಲೀಸರಿಂದ ಜಲಫಿರಂಗಿ ಪ್ರಯೋಗ

ತಿರುವನಂತಪುರ: ಚಿನ್ನಾಭರಣ ಹಗರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ವಪ್ನಾ ಸುರೇಶ್ ಆರೋಪ ಮಾಡಿದ ಬೆನ್ನಲ್ಲೇ, ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಘಟಕ ಗುರುವಾರ ತಿರುವನಂತಪುರದಲ್ಲಿ ಪ್ರತಿಭಟನೆ ನಡೆಸಿದೆ. ಕೇರಳದ ರಾಜಧಾನಿಯಲ್ಲಿ ಕೇರಳ ಕಾಂಗ್ರೆಸ್ ಮಹಿಳಾ ಘಟಕ ಹಾಗೂ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗಿಸಿದ್ದಾರೆ. ಚಿನ್ನ ತುಂಬಿದ […]

ಕೇರಳದಲ್ಲಿ ಸಿಎಎ ಜಾರಿ ಇಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

ತಿರುವನಂತಪುರಂ: ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ತಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಪ್ರತಿಪಾದಿಸಿದ್ದಾರೆ. ತಮ್ಮ ಸರ್ಕಾರದ ಮೊದಲ ವಾರ್ಷಿಕೋತ್ಸವದ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಸರ್ಕಾರವು ಸ್ಪಷ್ಟ ನಿಲುವನ್ನು ಹೊಂದಿದೆ. ಅದು ಹಾಗೆಯೆ ಮುಂದುವರಿಯಲಿದೆ” ಎಂದು ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಕಾನೂನನ್ನು ಜಾರಿಗೊಳಿಸುವುದಾಗಿ ಆಗಾಗ್ಗೆ ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಅದರಲ್ಲಿ […]