ರೈತ ಪ್ರತಿಭಟನೆ: ಕೇಂದ್ರ ಸರ್ಕಾರದಿಂದ ಪಂಚವಾರ್ಷಿಕ ಯೋಜನೆ ಪ್ರಸ್ತಾವ; ಕಾಲಾವಕಾಶ ಬೇಡಿದ ರೈತರು
ಚಂಡೀಗಢ: ಕಳೆದ ವಾರ ಪಂಜಾಬ್-ಹರಿಯಾಣ ಗಡಿಯಲ್ಲಿ ಭಾರೀ ಮುಖಾಮುಖಿಯಾಗಿದ್ದ ಬಿಕ್ಕಟ್ಟಿನಲ್ಲಿ ನಿನ್ನೆ ತಡರಾತ್ರಿ ಪ್ರತಿಭಟನಾ ನಿರತ ರೈತರು ಮತ್ತು ಸರ್ಕಾರಿ ನಿಯೋಗದ ನಡುವಿನ ನಾಲ್ಕನೇ ಸಭೆಯು ನಡೆದಿದೆ. ಮುಂದಿನ ಐದು ವರ್ಷಗಳವರೆಗೆ ಪಂಜಾಬ್‌ನ ರೈತರಿಂದ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಕನಿಷ್ಠ ಸುರಕ್ಷತಾ ಬೆಲೆಯಲ್ಲಿ (ಎಂಎಸ್‌ಪಿ) ಖರೀದಿಸಲು ಸರ್ಕಾರ ಉದ್ದೇಶಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮಧ್ಯರಾತ್ರಿಯ ನಂತರ ನಡೆದ ಚಂಡೀಗಢ ಸಭೆಯ ಬಳಿಕ ತಿಳಿಸಿದ್ದಾರೆ. ಪ್ರತಿಭಟನಾನಿರತ ರೈತರು ತಮ್ಮ ವೇದಿಕೆಗಳಲ್ಲಿ […]
ಪಡಿತರದಲ್ಲಿ ಕುಚ್ಚಲಕ್ಕಿ ವಿತರಣೆಗೆ ಕೇಂದ್ರದ ಅನುಮೋದನೆ: ಜಿಲ್ಲಾ ಬಿಜೆಪಿ ಅಭಿನಂದನೆ
ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿರುವ ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳಾದ ಎಂಒ4, ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ ಮತ್ತು ಅಭಿಲಾಷ್ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಿ ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪಡಿತರ ಮೂಲಕ ವಿತರಿಸಲು ಅನುಮತಿ ನೀಡಿರುವ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬೇಡಿಕೆಯಂತೆ ಕರ್ನಾಟಕ […]
ಕರಾವಳಿಗರಿಗೆ ಕುಚ್ಚಲಕ್ಕಿ ಭಾಗ್ಯ: ಪಡಿತರ ವಿತರಣೆಗೆ ಕೇಂದ್ರ ಅಸ್ತು
ಮಂಗಳೂರು/ ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆಯುವ ಮತ್ತು ಇಲ್ಲಿನ ಜನತೆ ಬಹುವಾಗಿ ಇಷ್ಟಪಟ್ಟು ಸೇವಿಸುವ ಕುಚ್ಚಲಕ್ಕಿಯನ್ನು ಪಡಿತರ ವಿತರಣೆಯಲ್ಲಿ ನೀಡಬೇಕು ಎನ್ನುವ ಬಹುದಿನಗಳ ಬೇಡಿಕೆ ಕಡೆಗೂ ಈಡೇರಿದೆ. ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿಯನ್ನು ಖರೀದಿಸಿ, ಪಡಿತರ ವ್ಯವಸ್ಥೆಯಡಿ ವಿತರಿಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸುವ ಸಾರ್ವಜನಿಕರ ಬೇಡಿಕೆಯ ಬಗ್ಗೆ ಕೇಂದ್ರ ಆಹಾರ ಮತ್ತು […]
ಒಂದು ಜಿಲ್ಲೆ ಒಂದು ಉತ್ಪನ್ನ ಉಡುಗೊರೆ ಕ್ಯಾಟಲಾಗ್‌ನ ಡಿಜಿಟಲ್ ಆವೃತ್ತಿ ಬಿಡುಗಡೆ
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಪಿಯೂಷ್ ಗೋಯಲ್ ಅವರು ‘ಒಂದು ಜಿಲ್ಲೆ ಒಂದು ಉತ್ಪನ್ನ’ ಉಡುಗೊರೆ ಕ್ಯಾಟಲಾಗ್‌ನ ಡಿಜಿಟಲ್ ಆವೃತ್ತಿಯನ್ನು ಅನಾವರಣಗೊಳಿಸಿದರು. 5 ಆಗಸ್ಟ್ 2022 ರಂದು ವಾಣಿಜ್ಯ ಭವನದಲ್ಲಿ ರಫ್ತು ಉತ್ತೇಜನಾ ಮಂಡಳಿಗಳು ಮತ್ತು ಉದ್ಯಮ ಸಂಘಗಳೊಂದಿಗಿನ ಸಭೆಯಲ್ಲಿ ಡಿಜಿಟಲ್ ಆವೃತ್ತಿ ಬಿಡುಗಡೆ ಗೊಳಿಸಲಾಯಿತು. ಉಡುಗೊರೆ ಕ್ಯಾಟಲಾಗ್ ಸುಗಂಧ ದ್ರವ್ಯಗಳು ಮತ್ತು ತೈಲಗಳು, ಭಾರತೀಯ ಸ್ಪಿರಿಟ್ ಗಳು, ಗೃಹಾಲಂಕಾರ ಉತ್ಪನ್ನಗಳು, ಬಟ್ಟೆಗಳು ಮತ್ತು […]