ನೀರಿನ ಲಭ್ಯತೆಯನ್ನು ಆಧರಿಸಿ ಯೋಜನೆ ರೂಪಿಸಿ: ಜಿ.ಪಂ ಸಿಇಓ ಪ್ರಸನ್ನ ಹೆಚ್.

ಉಡುಪಿ: ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಮೂಲಗಳನ್ನು ಆಧರಿಸಿ ಕುಡಿಯುವ  ನೀರು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಇಂದು ಮಣಿಪಾಲದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲ ಜೀವನ್ ಮಿಷನ್ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023 ನೇ ಸಾಲಿನ ಒಳಗಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಎಲ್ಲಾ ಮನೆಗಳಿಗೆ ನಳ್ಳಿ […]