ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡುಬಂದಲ್ಲಿ ಕಠಿಣ ಕ್ರಮ: ಉಡುಪಿ ನಗರಸಭೆ ಎಚ್ಚರಿಕೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆ, ವಾಣಿಜ್ಯ ಕಟ್ಟಡ, ಅಂಗಡಿ, ಹೋಟೆಲ್ ಇತರೆ ಕಟ್ಟಡಗಳಿಂದ ಉತ್ಪತ್ತಿಯಾಗುವಂತಹ ಘನತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿ ಬೇರ್ಪಡಿಸಿ, ಹಸಿಕಸ, ಒಣಕಸ, ಅಪಾಯಕಾರಿ ಕಸಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ, ಹಸಿಕಸವನ್ನು ಮನೆಯಲ್ಲಿ ಗೊಬ್ಬರವಾಗಿ ಪರಿವರ್ತನೆ ಮಾಡಬೇಕು. 100 ಕೆ.ಜಿ.ಗಿಂತ ಹೆಚ್ಚು ಉತ್ಪತ್ತಿಯಾಗುವಂತಹ ಬಹುಮಹಡಿ ಕಟ್ಟಡ, ಹೋಟೆಲ್‌ನವರು ಹಸಿಕಸವನ್ನು ಕಾಂಪೋಸ್ಟ್ ಮಾಡಿ ಮರುಬಳಕೆ ಮಾಡಬೇಕು.ಕರ್ನಾಟಕ ಮುನ್ಸಿಪಲ್ ಮ್ಯಾನೇಜ್ ವೇಸ್ಟ್ 2016 ರಲ್ಲಿ ಈ ಅಂಶವನ್ನು ಅಳವಡಿಸಿದ್ದು, ಇದನ್ನು ಮಾಲೀಕರು ಕಡ್ಡಾಯವಾಗಿ ನಿರ್ವಹಿಸಬೇಕು. ಈ ನಿಯಮವನ್ನು […]
55 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ; 34,000 ರೂ. ದಂಡ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆಗಸ್ಟ್ 19 ರಿಂದ 24 ರ ವರೆಗೆ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ ನಡೆಸಿ 55 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 34,000 ರೂ. ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸಿದ್ದಲ್ಲಿ ಬಾರಿ ದಂಡವನ್ನು ವಿಧಿಸಿ, ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು. ಜುಲೈನಿಂದದ ಈವರೆಗೆ ಒಟ್ಟು 425 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 1,04,200 ರೂ. […]
ವಿವಿಧೆಡೆ ದಾಳಿ: 107.81 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ
ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಜಿಲ್ಲೆಯ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ, ಒಟ್ಟು 107.81 ಕೆ. ಜಿ. ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 47,500 ರೂ. ದಂಡ ವಸೂಲಿ ಮಾಡಲಾಯಿತು. ಜೂನ್ 26 ರಂದು ಮಲ್ಪೆಯಲ್ಲಿ 41.87 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 24,000 ರೂ., ಜೂನ್ 28 ರಂದು ಪರ್ಕಳದಲ್ಲಿ 29.44 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 10,500 ರೂ. ಹಾಗೂ ಇಂದು ಶ್ರೀ ಕೃಷ್ಣ ಮಠದ ಬಳಿ ನಿಷೇದಿತ […]
ನಿಷೇಧಿತ ಪ್ಲಾಸ್ಟಿಕ್ ಮಾರಾಟ: 75 ಕೆ.ಜಿ ವಶ; ದಂಡ ವಸೂಲಿ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ದೊಡ್ಡಣಗುಡ್ಡೆ ಬಳಿ ಅಂಗಡಿಗಳಿಗೆ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನ ವಾಹನದ ಮೇಲೆ ಬುಧವಾರದಂದು ನಗರಸಭೆ ಆರೋಗ್ಯ ಶಾಖೆಯ ಅಧಿಕಾರಿಗಳು ದಾಳಿ ನಡೆಸಿ, 75 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 5000 ರೂ. ದಂಡ ವಿಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು. ಪ್ಲಾಸ್ಟಿಕ್ […]
346 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ; ದಂಡವಸೂಲಿ: ನಗರಸಭೆ ಅಧಿಕಾರಿಗಳಿಂದ ಕಾರ್ಯಾಚರಣೆ
ಉಡುಪಿ: ನಗರಸಭೆಯ ಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಬಳಿ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ ದಾಳಿ ನಡೆಸಿ 346 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 10,000 ರೂ. ದಂಡ ಹಾಗೂ ಅಜ್ಜರಕಾಡು ಪಾರ್ಕ್ ರಸ್ತೆ ಬಳಿ ತ್ಯಾಜ್ಯವನ್ನು ಸುಡುತ್ತಿರುವವರಿಗೆ 5000 ರೂ. ದಂಡ ವಿಧಿಸಿದರು. ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಸಾರ್ವಜನಿಕರು, ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು […]