ನಗರಸಭೆ ಅಧಿಕಾರಿಗಳಿಂದ ಕಾರ್ಯಾಚರಣೆ: 45 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ; ತಪ್ಪಿತಸ್ಥರಿಗೆ ದಂಡ

ಉಡುಪಿ: ಅ.5 ರಂದು ಉಡುಪಿ ನಗರಸಭೆ ಅಧಿಕಾರಿಗಳು ನಗರದಲ್ಲಿ ಧಿಢೀರ್ ಕಾರ್ಯಾಚರಣೆ ನಡೆಸಿದ್ದು, ಅಂಗಡಿಗಳಲ್ಲಿ ಕಾನೂನು ಬಾಹಿರವಾಗಿ ಬಳಕೆ ಮಾಡಲಾಗುತ್ತಿದ್ದ ಸುಮಾರು 45 ಕೆ.ಜಿ ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದು,10,200 ರೂಪಾಯಿಗಳ ದಂಡವನ್ನು ವಿಧಿಸಿದ್ದಾರೆ. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪೆನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‌ಗಳು, ಮಾರುಕಟ್ಟೆ ಸ್ಥಳ), ಶಾಪಿಂಗ್ ಕೇಂದ್ರಗಳು, ಸಿನಿಮಾ ಮಾಲ್‌ಗಳು, ಮನೆಗಳು, ಪ್ರವಾಸೋದ್ಯಮ ಸ್ಥಳಗಳು, […]

ಒಂದು ತಿಂಗಳಲ್ಲಿ 127 ಟನ್ ನಿಷೇಧಿತ ಪ್ಲಾಸ್ಟಿಕ್ ವಶ: 37 ಲಕ್ಷ ರೂಪಾಯಿ ದಂಡ ವಸೂಲಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜುಲೈ ತಿಂಗಳೊಂದರಲ್ಲೇ ರಾಜ್ಯಾದ್ಯಂತ ಹಠಾತ್ ತಪಾಸಣೆ ನಡೆಸಿ 127.052 ಟನ್ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಶಪಡಿಸಿಕೊಂಡಿದೆ ಮತ್ತು 37 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ಅಂಗಡಿಗಳು, ಉತ್ಪಾದನಾ ಘಟಕಗಳು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳ ಮೇಲಿನ ದಾಳಿಯಲ್ಲಿ, ಜುಲೈನಲ್ಲಿ 22,116 ತಪಾಸಣೆಗಳನ್ನು ನಡೆಸಲಾಗಿದ್ದು 15,629 ಉಲ್ಲಂಘನೆಗಳು ಕಂಡುಬಂದಿವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಹಿರಿಯ ಕೆಎಸ್‌ಪಿಸಿಬಿ ಅಧಿಕಾರಿಯೊಬ್ಬರು ಡಿಎಚ್‌ಗೆ ನೀಡಿದ ಸಂದರ್ಶನದಲ್ಲಿ, ಸೂಕ್ತ ಪರ್ಯಾಯದ ಕೊರತೆಯಿಂದಾಗಿ ಏಕ […]

ನಗರಸಭೆ: ಜುಲೈ 16 ರಂದು ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಸಭೆ

ಉಡುಪಿ: ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಜುಲೈ 16 ರಂದು ಮಧ್ಯಾಹ್ನ 12 ಗಂಟೆಗೆ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ ನಡೆಯಲಿದ್ದು, ಎಲ್ಲಾ ಹೋಟೆಲ್ ಮಾಲೀಕರು, ವರ್ತಕರು, ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರು, ಕಲ್ಯಾಣ ಮಂಟಪದ ಮಾಲೀಕರು, ಬೀದಿ ಬದಿ ವ್ಯಾಪಾರಿ ಸಂಘಗಳ ಸದಸ್ಯರು ಹಾಗೂ ಕೈಗಾರಿಕಾ ಸಂಘಟನೆಯ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ಲಾಸ್ಟಿಕ್ ಬ್ಯಾನ್: ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಿಯಂತ್ರಣ ಕೊಠಡಿಗಳ ಸ್ಥಾಪನೆ

ನವದೆಹಲಿ: ಕಾನೂನಿನ ಪರಿಣಾಮಕಾರಿ ಜಾರಿಗಾಗಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ನ ಅಕ್ರಮ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಪರಿಶೀಲಿಸಲು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುವುದು ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಿಳಿಸಿದೆ. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆ ನಿಷೇಧ ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಏಕ ಬಳಕೆಯ ಪ್ಲಾಸ್ಟಿಕ್ ಎಂದರೆ ಒಮ್ಮೆ ಮಾತ್ರ ಬಳಸಿ […]

ಜು.1 ರಿಂದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲೇಟ್, ಪ್ಲಾಸ್ಟಿಕ್ ಧ್ವಜ, ಪ್ಲಾಸ್ಟಿಕ್ ಕಪ್, ಪ್ಲಾಸ್ಟಿಕ್ ಸ್ಪೂನ್, ಅಂಟಿಕೊಳ್ಳುವ ಫಿಲ್ಮ್, ಎಲ್ಲಾ ದಪ್ಪದ ಡೈನಿಂಗ್ ಟೇಬಲ್ ನಲ್ಲಿ ಹರಡುವ ಬಳಸುವ ಪ್ಲಾಸ್ಟಿಕ್ ಹಾಳೆ, ಸ್ಟ್ರಾ, ಥರ್ಮಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳ ಜೊತೆಗೆ ಹೆಚ್ಚುವರಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಸ್ಟಿಕ್‌ಗಳೊಂದಿಗೆ ಇಯರ್ ಬಡ್, ಬಲೂನ್‌ಗೆ ಬಳಸುವ […]