ನ.1ರಿಂದ ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ: ಜಿಪಂ ಅಧ್ಯಕ್ಷ ದಿನಕರ ಬಾಬು
ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ನವೆಂಬರ್ 1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತಂತೆ ಎಲ್ಲಾ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ ನಿಷೇಧ ಕಾಯಿದೆ 2016 ರಲ್ಲಿ ಜಾರಿಯಾಗಿದ್ದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಆದೇಶ ಪಾಲನೆ ನಡೆಯುತ್ತಿಲ್ಲ. ಅಂಗಡಿಗಳಲ್ಲಿ, […]