ಮಂಗಳೂರು: ಪ್ಲಾಸ್ಟಿಕ್ ವಸ್ತುಗಳ ಮಾರಾಟ; ಅಧಿಕಾರಿಗಳಿಂದ ದಾಳಿ

ಮಂಗಳೂರು: ಕಾನೂನು ಬಾಹಿರವಾಗಿ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.   ಮಂಗಳೂರು ನಗರದ ಸೆಂಟ್ರಲ್ ಸಿಟಿ ಮಾರ್ಕೆಟ್ ನ ಹಲವು ಅಂಗಡಿಗಳ ಮೇಲೆ ಮನಪಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕಾನೂನು ಬಾಹಿರವಾಗಿ ಮಾರಾಟ ಮಾಡಲು ದಾಸ್ತಾನಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ಸಾಮಾಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಅಧಿಕಾರಿಗಳು ವಿವಿಧ ಭಾಗಗಳಲ್ಲಿ ಹೆಚ್ಚಿನ ತನಿಖೆ ನಡೆಸಲಿದ್ದಾರೆ.

ಪ್ಲಾಸ್ಟಿಕ್ ತಂತ್ರಜ್ಞಾನ: ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಉಡುಪಿ, ಮೇ 30: ಮೈಸೂರಿನ ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಭಾರತ ಸರ್ಕಾರದ ರಸಾಯನ, ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ. 2019-20 ನೇ ಸಾಲಿನ 2 ನೇ ವರ್ಷದ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ-2 ವರ್ಷ, ಡಿಪ್ಲೋಮಾ […]