ಕೃಷಿ ಸಮ್ಮಾನ್-ಪಿ.ಎಂ ಕಿಸಾನ್ ಸೌಲಭ್ಯಗಳಿಗೆ ಇ-ಕೆವೈಸಿ ಜೋಡಣೆಗೆ ಕೊನೆಯ ಅವಕಾಶ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪಿ.ಎಂ ಕಿಸಾನ್ ಬೀಮಾ ಯೋಜನೆಯ ಆರ್ಥಿಕ ಸೌಲಭ್ಯ ಪಡೆಯಲು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ. ಜಿಲ್ಲೆಯ ರೈತರಿಗೆ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಈಗಾಗಲೇ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳಲು ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ […]

ಪಿ.ಎಂ ಕಿಸಾನ್ ಯೋಜನೆ : ಇ-ಕೆವೈಸಿ ಕಡ್ಡಾಯ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ಫಲಾನುಭವಿ ರೈತರು ಮೇ 31 ರ ಒಳಗೆ ಹತ್ತಿರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.