ಅಖಿಲ ಭಾರತ ಮೀನುಗಾರರ ವೇದಿಕೆಯ ನಿಯೋಗದಿಂದ ಪ್ರಧಾನಿ ಭೇಟಿ

ಉಡುಪಿ: ಅಖಿಲ ಭಾರತ ಮೀನುಗಾರ ವೇದಿಕೆಯ ನೇತೃತ್ವದ ನಿಯೋಗ ಮಂಗಳವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಹಾಗೂ 7 ಮಂದಿ ಮೀನುಗಾರರನ್ನು ಶೀಘ್ರವಾಗಿ ಪತ್ತೆ ಹಚ್ಚಲು ವಿಶೇಷ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಹಾಗೆಯೇ ಈ ವೇಳೆ ಮೀನುಗಾರಿಕೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳಾದ ಮೀನುಗಾರಿಕೆ ಬಳಸುವ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿ, ಮೀನುಗಾರಿಕೆಗೆ ಸಂಬಂಧಪಟ್ಟ ಚಟುವಟಿಕೆಗಳಿಗೆ ಜಿಎಸ್ಟಿ ವಿನಾಯಿತಿ, ಮೀನುಗಾರಿಕೆಗೆ ಕೇಂದ್ರ ಸರ್ಕಾರದ ಪ್ರತ್ಯೇಕ […]