ನಮ್ಮ ಯೋಧರ ತಾಕತ್ತು ಜಗತ್ತಿಗೆ ಗೊತ್ತಿದೆ: ಭೂ ವಿಸ್ತರಣೆಗೆ ಬಂದವರು ಸೋತು ಓಡಿಹೋಗಿದ್ದಾರೆ: ಪ್ರಧಾನಿ ಮೋದಿ

ಲೇಹ್: ನಮ್ಮ ಯೋಧರ ಶೌರ್ಯ, ತ್ಯಾಗ ಇಡೀ ಜಗತ್ತಿಗೆ ಗೊತ್ತಿದೆ. ಭಾರತ ಮಾತೆಯ ವಿರೋಧಿಗಳು ನಿಮ್ಮ ತಾಕತ್ತು, ಕೋಪವನ್ನು ನೋಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಲ್ವನ್ ಕಣಿವೆಯಲ್ಲಿ ಭಾರತ–ಚೀನಾ ಯೋಧರ ನಡುವೆ ಸಂಘರ್ಷ ನಡೆದು ಎರಡು ವಾರಗಳ ಬಳಿಕ ಅಲ್ಲಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿಯವರು ಯೋಧರನ್ನು ಉದ್ದೇಶಿಸಿ ಮಾತನಾಡಿದರು. ನಿಮ್ಮ ಶೌರ್ಯದ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ನಿಮ್ಮ ಸಾಹಸಗಾಥೆ ದೇಶದ ಪ್ರತಿಯೊಂದು ಮನೆಯಲ್ಲಿಯೂ ಪ್ರತಿಧ್ವನಿಸುತ್ತಿದೆ. ಗಾಲ್ವನ್ ಕಣಿವೆಯಲ್ಲಿ ಹುತಾತ್ಮರಾದ ಯೋಧರಿಗೆ ಮತ್ತೊಮ್ಮೆ ಗೌರವ […]