ಕೊಚ್ಚಿ-ಮಂಗಳೂರು ಸಿಎನ್ ಜಿ ಪೈಪ್ ಲೈನ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಮಂಗಳೂರು: ಕೊಚ್ಚಿ-ಮಂಗಳೂರು ನಡುವಿನ ಸಿಎನ್’ಜಿ (ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್) ಪೈಪ್ ಲೈನ್ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಕುರಿತು ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿಯವರು, ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು. ಇದು ಭವಿಷ್ಯದ ಯೋಜನೆಯಾಗಿದ್ದು, ಬಹಳಷ್ಟು ಜನರ ಬದುಕಿನಲ್ಲಿ ಧನಾತ್ಮಕ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. ಸುಮಾರು 450 ಕಿ.ಮೀ ದೂರದ ಈ ಪೈಪ್’ಲೈನ್ ಹಿಂದೆಯೇ ಆರಂಭಗೊಂಡಿತ್ತು. ಅನೇಕ ಅಡೆತಡೆಗಳನ್ನು […]