ನವೆಂಬರ್ 28 ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂದು ಸ್ಥಳೀಯ ರಜೆ ಘೋಷಣೆ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ದೇಶದ ಪ್ರಧಾನಿಯೋರ್ವರು ಸರಿಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ […]