ಪ್ರಧಾನಿ ಮೋದಿ ಮಂಗಳೂರು ಭೇಟಿ: ಕ.ರಾ.ರ.ಸಾ.ನಿಗಮದ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಉಡುಪಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟಂಬರ್ 2 ರಂದು ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸದರಿ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಫಲಾನುಭವಿಗಳನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ನಿಯೋಜಿಸಲಾಗಿರುತ್ತದೆ. ಆದ್ದರಿಂದ ಸದರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆ ಬಸ್ ಗಳ […]
ಮಂಗಳೂರು: “ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್” ಅಭಿಯಾನಕ್ಕೆ ಚಾಲನೆ

ಮಂಗಳೂರು: ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರ್ ಕುಡ್ಲ ತುಳು ಸಂಘಟನೆ, ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ಸೆಪ್ಟೆಂಬರ್ 1 ಗುರುವಾರದಂದು ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ ಬಂಜಾರು ಮಲೆ ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಈ ಅಭಿಯಾನವು 1 ಲಕ್ಷಕ್ಕೂ ಅಧಿಕ […]
ಪ್ರಧಾನಿ ಮೋದಿ ರಕ್ಷಣೆಗೆ ಮುಧೋಳ ನಾಯಿಗಳ ನಿಯೋಜನೆ: ಛತ್ರಪತಿ ಶಿವಾಜಿ ಮಹಾರಾಜರ ಸೇನೆಯಲ್ಲಿ ಬಳಸಲಾಗಿದ್ದ ಶ್ವಾನಗಳಿಂದ ಪ್ರಧಾನಿಗೆ ಭದ್ರತೆ

ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಎಸ್.ಪಿ.ಜಿ ಭದ್ರತಾ ತಂಡದಲ್ಲಿ ಇನ್ನು ಮುಂದೆ ಕರ್ನಾಟಕದ ಮುಧೋಳ ನಾಯಿಗಳನ್ನು ನಿಯೋಜಿಸಲಾಗುವುದು ಎಂದು ವರದಿಯಾಗಿದೆ. ಅದರಲ್ಲೂ ಛತ್ರಪತಿ ಶಿವಾಜಿ ಮಹಾರಾಜರ ಸೇನೆಯಲ್ಲಿ ಈ ಮುಧೋಳ ಹೌಂಡ್ ಗಳು ಅಮೋಘ ಶೌರ್ಯ ಮೆರೆದಿತ್ತು. ಇದಲ್ಲದೆ ಭಾರತೀಯ ಸೇನೆಯಲ್ಲಿಯೂ ಮುಧೋಳ ನಾಯಿಗಳ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ. ಇದೀಗ ಈ ನಾಯಿಗಳು ಪ್ರಧಾನಿ ಮೋದಿಯವರ ಭದ್ರತೆಗೆ ಸಿದ್ಧವಾಗಿವೆ ಎನ್ನಲಾಗಿದೆ. ಉದ್ದನೆಯ ಕಾಲುಗಳನ್ನು ಹೊಂದಿರುವ ತೆಳ್ಳಗಿನ ಅಪ್ಪಟ ದೇಸೀ ನಾಯಿ ಮುಧೋಲ್ ಹೌಂಡ್ ಬೇಟೆಯಾಡುವುದರಲ್ಲಿ ನಿಸ್ಸೀಮ. ಈ […]
ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ವಿವಿಧ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು: ಪ್ರಧಾನಿ ಮೋದಿ ಸೆಪ್ಟೆಂಬರ್ 2, ಶುಕ್ರವಾರದಂದು ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ಮಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಮಂಗಳೂರಿನ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಸಮಾವೇಶವನ್ನು ಆಯೋಜಿಸಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸಿದೆ. ಇದೇ ವೇಳೆ ನಗರದ ಹೊರವಲಯ ಕೂಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ಯೋಜನೆ ಹಾಕಿಕೊಂಡಿದೆ. ಈ […]
ತಾಯಿಯ 100ನೇ ವರ್ಷದ ಹುಟ್ಟು ಹಬ್ಬದಂದು ಪ್ರಧಾನಿ ಮೋದಿಯಿಂದ ಪಾದಪೂಜೆ

ಗಾಂಧಿನಗರ: ಜೂನ್ 18 ರಂದು ತಾಯಿ ಹೀರಾ ಬಾ 100 ನೇ ವರ್ಷದ ಹುಟ್ಟುಹಬ್ಬದಂದು ತನ್ನ ತಾಯಿಯನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ತಾಯಿಯ ಪಾದಪೂಜೆ ನಡೆಸಿ ಅವರ ಆಶೀರ್ವಾದ ಪಡೆದುಕೊಂಡರು. ಮೋದಿ ಶನಿವಾರದಂದು ಬೆಳ್ಳಂಬೆಳಗ್ಗೆ ಗುಜರಾತಿನಲ್ಲಿರುವ ತಮ್ಮ ತಾಯಿಯ ಮನೆಗೆ ಭೇಟಿ ನೀಡಿ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ, ಆಶೀರ್ವಾದ ಪಡೆದುಕೊಂಡರು. “ನನ್ನ ತಾಯಿ ಎಷ್ಟು ಸರಳವಾಗಿದ್ದಾಳೆಯೋ ಅಷ್ಟೇ ಅಸಾಧಾರಣವಾಗಿದ್ದಾಳೆ. ಎಲ್ಲಾ ತಾಯಂದಿರಂತೆಯೆ…ಅಮ್ಮ ಎನ್ನುವುದು ಬರೀ ಶಬ್ದವಲ್ಲ, ಇದರಲ್ಲಿ ಪ್ರೀತಿ, ತಾಳ್ಮೆ, ನಂಬಿಕೆ ಎಷ್ಟೊಂದೆಲ್ಲಾ […]