ಒಡಿಶಾ ತ್ರಿವಳಿ ರೈಲು ಅಪಘಾತ: ಎರಡೂ ರೈಲು ಹಳಿಗಳ ದುರಸ್ತಿ ಸಂಪೂರ್ಣ; ಸೇವೆ ಪುನರಾರಂಭ

ಒಡಿಶಾ: 275 ಜನರನ್ನು ಬಲಿತೆಗೆದುಕೊಂಡ ಭೀಕರ ಬಾಲಸೋರ್ ರೈಲು ಅಪಘಾತ ಸಂಭವಿಸಿದ ವಿಭಾಗದಲ್ಲಿ ರೈಲು ಸಂಚಾರ ಪುನರಾರಂಭವಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಭಾನುವಾರ ಪ್ರಯಾಣಿಕರು ಮತ್ತು ಸಿಬ್ಬಂದಿಯತ್ತ ಕೈಬೀಸಿದರು ಮತ್ತು ಅವರ ಸುರಕ್ಷಿತ ಪ್ರಯಾಣಕ್ಕಾಗಿ ಪ್ರಾರ್ಥಿಸಿದರು. ಬಾಲಾಸೋರ್‌ನಲ್ಲಿ ನಡೆದ ಭೀಕರ ತ್ರಿವಳಿ ರೈಲು ಅಪಘಾತ ಸಂಭವಿಸಿದ 51 ಗಂಟೆಗಳ ಅವಧಿಯಲ್ಲಿ ಮೇಲಿನ ಮತ್ತು ಕೆಳಗಿನ ಎರಡೂ ರೈಲು ಹಳಿಗಳ ದುರಸ್ತಿ ಸಂಪೂರ್ಣವಾಗಿದ್ದು ಸೇವೆಗಳು ಪುನರಾರಂಭಗೊಂಡಿವೆ. ದುರ್ಘಟನೆಯಲ್ಲಿ275 ಜನ ಸಾವನ್ನಪ್ಪಿದ್ದು 1,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. […]
ಒಡಿಶಾ ರೈಲು ದುರ್ಘಟನೆ: ಸಂತ್ರಸ್ತರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯ ಭರವಸೆ

ಭುವನೇಶ್ವರ: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಳಗಾದವರನ್ನು ಶನಿವಾರ ಭೇಟಿ ಮಾಡಿದ ಪ್ರಧಾನಿ ಮೋದಿ, ಸಂತ್ರಸ್ತ ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಚಿಕಿತ್ಸೆ ನೀಡಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಹೇಳಿದರು. “ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರು ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ” ಎಂದು ಅವರು ಹೇಳಿದರು. ದುರಂತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸರಕಾರ ಬೆಂಬಲವಾಗಿ ನಿಂತಿದೆ ಎಂದು ಅವರು ಭರವಸೆ ನೀಡಿದರು. ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿರುವ ಬಾಲಸೋರ್ […]
ಒಡಿಸಾ ರೈಲು ಅಪಘಾತ ಪ್ರಕರಣ: ಪರಿಸ್ಥಿತಿ ಅವಲೋಕಿಸಲು ಒಡಿಸಾಗೆ ತೆರಳಿದ ಪ್ರಧಾನಿ ಮೋದಿ

ನವದೆಹಲಿ: ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಮೂರು ರೈಲುಗಳ ಮಧ್ಯೆ ಭೀಕರ ಅಪಘಾತದ ಸ್ಥಳವನ್ನು ಸಮೀಕ್ಷೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಒಡಿಶಾಗೆ ತೆರಳಿದರು. ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಗ್ಗೆ ವರದಿಗಳಾಗಿವೆ. ವಿವರಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ರೈಲು ಅಪಘಾತದ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಲಿದ್ದು, ಮತ್ತು ನಂತರ ಕಟಕ್‌ನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು […]
ಮೇ. 28 ರಂದು ನೂತನ ಸಂಸತ್ ಭವನ ಉದ್ಘಾಟನೆ ನಡೆಸಲಿರುವ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನೆಗೆ ದಿನಗಣನೆ ನಡೆಯುತ್ತಿದ್ದು, ಬಹುತೇಕ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮ ವರದಿಯಾಗಿದೆ. ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಕಟ್ಟಡದ ಉದ್ಘಾಟನೆ ನಡೆಯಲಿದೆ ಎನ್ನಲಾಗಿದೆ. ನಾಲ್ಕು ಅಂತಸ್ತಿನ ಸಂಸತ್ ಭವನದಲ್ಲಿ 1,224 ಸಂಸತ್ ಸದಸ್ಯರಿಗೆ ಆಸನ ವ್ಯವಸ್ಥೆ ಇದ್ದು, ಅತ್ಯಾಧುನಿಕ ಸವಲತ್ತು ಮತ್ತು ಸುರಕ್ಷತೆಯನ್ನು ಒಳಗೊಂಡಿದೆ. ಲೋಕಸಭೆ […]
ಮೇ 3 ರಂದು ಸಾರಿಗೆ ಕೆ.ಎಸ್.ಆರ್.ಟಿಸಿ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಬಸ್‌ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಮೇ 3 ರಂದು ಅಂಕೋಲದ ಹಟ್ಟಿಕೇರಿಯಲ್ಲಿ ನಡೆಯುವ ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿರುವುದರಿಂದ, ಸದ್ರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ಧಾಪುರ, ಬೈಂದೂರು ಹಾಗೂ ಭಟ್ಕಳ ವಲಯ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಕ.ರಾ.ರ.ಸಾ.ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.