ಪ್ರಧಾನಿ ಮೋದಿ ಭೇಟಿ ಮಾಡಿದ ಕನ್ನಡ ಚಿತ್ರರಂಗದ ಕಲಾವಿದರು

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಯಶ್, ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು, ಬ್ಲಾಗರ್ ಅಯ್ಯೋ ಶ್ರದ್ಧಾ ಮತ್ತು ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಇಂಡಿಯಾ ಪವಿಲಿಯನ್ ನಲ್ಲಿ ಏರೋ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದು ಈ ಸಂದರ್ಭ ಭೇಟಿ ನಡೆದಿದೆ. ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಯಶ್, ಮೋದಿಯವರ ಬಳಿ ಚಿತ್ರೋದ್ಯಮದ ಬಗ್ಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. […]
ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಲು ದೌಡಾಯಿಸಿದ ಪ್ರಧಾನಿ ಮೋದಿ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿಯವರನ್ನು ಮಂಗಳವಾರ ರಾತ್ರಿ ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ತಾಯಿಯ ಆರೋಗ್ಯ ವಿಚಾರಿಸಲು ಪ್ರಧಾನಿ ಮೋದಿ ಅಹಮದಾಬಾದಿಗೆ ದೌಡಾಯಿಸಿದ್ದಾರೆ. #WATCH | PM Modi arrives at UN Mehta Institute of Cardiology & Research Centre in Ahmedabad where his mother Heeraben Modi is admitted As per the hospital, her […]
ಮೈಸೂರು ಮತ್ತು ಚೆನ್ನೈ ನಡುವೆ ಚಲಿಸುವ ದಕ್ಷಿಣ ಭಾರತ ಪ್ರಥಮ ವಂದೇ ಭಾರತ್ ರೈಲು ಇಂದು ಉದ್ಘಾಟನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿನಿಂದ ಭಾರತದ ಐದನೇ ವಂದೇ ಭಾರತ್‌ಗೆ ಚಾಲನೆ ನೀಡಲಿದ್ದು, ಇದು ದಕ್ಷಿಣದ ಮೊದಲ ಸೆಮಿ-ಹೈ-ಸ್ಪೀಡ್ ರೈಲಾಗಿದೆ. ರೈಲು ಮೈಸೂರು ಮತ್ತು ಚೆನ್ನೈ ನಡುವೆ ಚಲಿಸಲಿದ್ದು, ಈ ಮಾರ್ಗದ ಪ್ರಯಾಣದ ಸಮಯವನ್ನು ಕಡಿತಗೊಳಿಸಲು ಸಹಾಯ ಮಾಡುತ್ತದೆ. ವಂದೇ ಭಾರತ್ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಉದ್ಘಾಟನೆಗೊಂಡು ನಂತರ ಚೆನ್ನೈಗೆ ಆಗಮಿಸಲಿದೆ. ಹೊಸ ವಂದೇ ಭಾರತ್ ರೈಲಿನ ಪ್ರಮುಖ ಅಂಶಗಳು: ಚೆನ್ನೈನಿಂದ ಮೈಸೂರಿಗೆ ಪ್ರಯಾಣಿಸುವ ಪ್ರಯಾಣಿಕರು ಕಾರ್ ಕುರ್ಚಿಗೆ 1,200 ರೂ ಮತ್ತು […]
ಇಸ್ರೇಲಿನಲ್ಲಿ ಮತ್ತೊಮ್ಮೆ ಬೆಂಜಮಿನ್ ನೆತನ್ಯಾಹು ಸರ್ಕಾರ್: ಮಿತ್ರನಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಟೆಲ್ ಅವೀವ್: ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಆಡಳಿತ ನಡೆಸಲು ಸಜ್ಜಾಗಿರುವ ಬೆಂಜಮಿನ್ ನೆತನ್ಯಾಹು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ಅವರು ಟ್ವಿಟರ್‌ನಲ್ಲಿ ಹೀಬ್ರೂ ಭಾಷೆಯಲ್ಲಿ ಅಭಿನಂದನೆ ಸಲ್ಲಿಸಿದ್ದು, “ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸಲು ನಮ್ಮ ಜಂಟಿ ಪ್ರಯತ್ನಗಳನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ. מזל טוב ידידי @netanyahu על הצלחתך בבחירות. אני מצפה להמשיך במאמצים המשותפים שלנו להעמקת […]
ತನ್ನ 30 ವರ್ಷಗಳ ಪ್ರತಿಜ್ಞೆ ಪೂರ್ಣಗೊಳಿಸಿದ ಪ್ರಧಾನಿ ಮೋದಿ: ಇದೇ ಮೊದಲ ಬಾರಿಗೆ ಅಯೋಧ್ಯೆಯ ಲಕ್ಷದೀಪೋತ್ಸವದಲ್ಲಿ ಭಾಗಿ

ಅಯೋಧ್ಯಾ: 1990 ಸೆಪ್ಟೆಂಬರ್ 25 ರಂದು ಸೋಮನಾಥ-ಅಯೋಧ್ಯೆ ರಾಮ ರಥಯಾತ್ರೆ ಪ್ರಾರಂಭವಾಯಿತು. ಆಗ ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ನಿಂದ ಹೊರಡುವ ಯಾತ್ರೆಯ ಸಾರಥಿಯಾಗಿದ್ದರು. ಈ ಏಕತಾ ಯಾತ್ರೆಯು ಕಾಶ್ಮೀರದ ಲಾಲ್ ಚೌಕ್‌ನಲ್ಲಿ 26 ಜನವರಿ 1992 ರಂದು ನರೇಂದ್ರ ಮೋದಿ ಅವರು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಮುಕ್ತಾಯಗೊಂಡಿತು. ಇದಕ್ಕೂ ಕೆಲ ದಿನಗಳ ಮುನ್ನ ಜನವರಿ 14 ರಂದು, ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಭಗವಾನ್ ಶ್ರೀರಾಮನ ಆಶೀರ್ವಾದವನ್ನು ಕೋರಿದ ಬಳಿಕ ಮೋದಿಯವರು […]